Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಸ್ ಟ್ರಸ್...

ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಸ್ ಟ್ರಸ್ ಬದಲು ರಿಷಿ ಸುನಕ್ರನ್ನು ತರಲು ಬಂಡಾಯ ನಾಯಕರಿಂದ ಪ್ರಯತ್ನ: ವರದಿ

ವಾರ್ತಾಭಾರತಿವಾರ್ತಾಭಾರತಿ15 Oct 2022 10:56 PM IST
share
ಬ್ರಿಟನ್ ಪ್ರಧಾನಿ ಹುದ್ದೆಗೆ ಲಿಸ್ ಟ್ರಸ್ ಬದಲು ರಿಷಿ ಸುನಕ್ರನ್ನು ತರಲು ಬಂಡಾಯ ನಾಯಕರಿಂದ ಪ್ರಯತ್ನ: ವರದಿ

ಲಂಡನ್: ಬ್ರಿಟನ್ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಾರ್ಟಿ(Conservative Party)ಯ ಮುಖ್ಯಸ್ಥರು ಮತ್ತು ಪ್ರಧಾನಿ ಹುದ್ದೆಗೆ ಲಿಸ್ ಟ್ರಸ್ (lis truss)ಅವರ ಬದಲಾಗಿ ಅವರ ಪ್ರತಿಸ್ಪರ್ಧಿ ಭಾರತೀಯ ಮೂಲದ ರಿಷಿ ಸುನಕ್(Rishi Sunak) ಅವರನ್ನು ತರುವ ಪ್ರಯತ್ನ ಪಕ್ಷದ ಕೆಲ ಬಂಡಾಯ ನಾಯಕರಿಂದ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ hindustantimes.com ವರದಿ ಮಾಡಿದೆ.

ಮಾಜಿ ನಾಯಕತ್ವ ಪ್ರತಿಸ್ಪರ್ಧಿ ಸುನಕ್ ಅವರನ್ನು ಒಳಗೊಂಡ "ಯುನಿಟಿ" ("Unity")ಜಂಟಿ ಟಿಕೆಟ್ ತಂಡ ಈ ಕಾರ್ಯತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

ನಾಯಕತ್ವಕ್ಕೆ ನಡೆದ ಚುನಾವಣೆಯಲ್ಲಿ ತಪ್ಪು ನಾಯಕರನ್ನು ಆಯ್ಕೆ ಮಾಡಲಾಗಿದೆ ಎಂದು ಟೋರಿ ಪಕ್ಷದ ಬೆಂಬಲಿಗರಲ್ಲಿ ಸುಮಾರು ಅರ್ಧದಷ್ಟು ಮಂದಿ 'ದ ಟೈಮ್ಸ್' ನಡೆಸಿದ ಯೂಗೋವ್ ಸಮೀಕ್ಷೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಪಕ್ಷದ ಸದಸ್ಯರು ತಪ್ಪು ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ ಎಂದು ಕಳೆದ ಚುನಾವಣೆಯಲ್ಲಿ ಕನ್ಸರ್ವೇಟಿವ್ ಪಕ್ಷಕ್ಕೆ ಮತ ನೀಡಿದ್ದ ಶೇಕಡ 62ರಷ್ಟು ಮಂದಿ ಸಮೀಕ್ಷೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಆದರೆ ಸದಸ್ಯರ ಆಯ್ಕೆ ಸರಿ ಎಂದು ಅಭಿಪ್ರಾಯಪಟ್ಟವರ ಪ್ರಮಾಣ ಶೇಕಡ 15ರಷ್ಟು ಮಾತ್ರ ಎನ್ನಲಾಗಿದೆ.

ಇದು ಸಂಸತ್ತಿನ ಟೋರಿ ಸದಸ್ಯರಲ್ಲಿ ಆತಂಕ ಸೃಷ್ಟಿಸಿದೆ ಎನ್ನಲಾಗಿದ್ದು, ಈ ಕಾರಣದಿಂದ ಹೆಚ್ಚು ಮತ ಪಡೆದ ಟ್ರುಸ್ ಬದಲಾಗಿ ಪರ್ಯಾಯ ಅಭ್ಯರ್ಥಿಯನ್ನು ಪರಿಶೀಲಿಸಲು ಮುಂದಾಗಿದೆ. ಈ ಪರ್ಯಾಯ ಮುಖಂಡರ ಸಾಲಿನಲ್ಲಿ 42 ವರ್ಷದ ಸುನಕ್ ಮುಂಚೂಣಿಯಲ್ಲಿದ್ದು, ಪ್ರಧಾನಿ ಹುದ್ದೆ ರೇಸ್ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕಮೊನ್ಸ್ ಪೆನ್ನಿ ಮಾರ್ಡಂಟ್ ಅವರ ಹೆಸರೂ ಪರಿಶೀಲನೆಯಲ್ಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ hindustantimes.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X