ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ದ್ರೌಪದಿ ಮುರ್ಮು

ದ್ರೌಪದಿ ಮುರ್ಮು, Photo:PTI
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರು ರವಿವಾರ ಹೊಸದಿಲ್ಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
64ರ ವಯಸ್ಸಿನ ಮುರ್ಮು 2022ರ ಜುಲೈ 25ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
..ಮುರ್ಮು ಅವರಿಗೆ ಇಂದು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.... ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.
Next Story





