Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಭಾರತ್ ಜೋಡೊ' ಯಾತ್ರೆ ಬಳಿಕ 'ಬಸ್...

'ಭಾರತ್ ಜೋಡೊ' ಯಾತ್ರೆ ಬಳಿಕ 'ಬಸ್ ಯಾತ್ರೆ'ಗೆ ನಿರ್ಧಾರ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ16 Oct 2022 7:29 PM IST
share
ಭಾರತ್ ಜೋಡೊ ಯಾತ್ರೆ ಬಳಿಕ ಬಸ್ ಯಾತ್ರೆಗೆ ನಿರ್ಧಾರ: ಡಿ.ಕೆ.ಶಿವಕುಮಾರ್

ಬಳ್ಳಾರಿ, ಅ. 16:  ‘ರಾಜ್ಯದ ಎಲ್ಲ 224 ಕ್ಷೇತ್ರಗಳನ್ನೂ ಮುಟ್ಟಬೇಕೆಂಬ ಕಾರಣಕ್ಕೆ ನಾನು, ಸಿದ್ದರಾಮಯ್ಯ ಹಾಗೂ ಎಐಸಿಸಿ ನಾಯಕರು ಕೂತು ಚರ್ಚಿಸಿ ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ಸಂಬಂಧ ತೀರ್ಮಾನ ಮಾಡಿದ್ದೇವೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇವೆ. ಜನರನ್ನು ಮರೆತು ಮಲಗಿರುವ ಸರಕಾರವನ್ನು ನಾವು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ಜಿಲ್ಲೆಯ ಮೋಕಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಮುಂಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಯಾರ ಶಕ್ತಿ ಏನು, ಜನರ ಬಳಿ ಕೆಲಸ ಮಾಡಿರುವವರು, ಜನತೆಯ ವಿಶ್ವಾಸ ಉಳಿಸಿಕೊಂಡಿರುವವರನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ. ಭಾರತ ಐಕ್ಯತಾ ಯಾತ್ರೆ ಮುಗಿದ ನಂತರ ಮಾತನಾಡುತ್ತೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

‘ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನರಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ. ಚುನಾವಣೆ ಎದುರಾಗುತ್ತಿದ್ದು, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ, ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರ ಪ್ರೀತಿ, ವಿಶ್ವಾಸ ಅಪಾರ. ಶ್ರಮ ಇದ್ದಲಿ ಫಲ ಎಂಬುದರಲ್ಲಿ ನಮಗೆ ನಂಬಿಕೆ ಇದೆ' ಎಂದು ನುಡಿದರು.

‘ರಾಜಕಾರಣದಲ್ಲಿರುವಾಗ ದೇಶದಲ್ಲಿ ಬದಲಾವಣೆ ತಂದು ಸಾಧನೆ ಮಾಡಬೇಕು. ದೇಶ ಒಡೆಯಲಾಗುತ್ತಿದ್ದು, ದ್ವೇಷ, ಆರ್ಥಿಕ ಸಂಕಷ್ಟ, ನಿರುದ್ಯೋಗ, ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಜನ ಹೆಚ್ಚು ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಬರುತ್ತಿದ್ದಾರೆ. ನಾವು ಮಕ್ಕಳನ್ನು ಕರೆತಂದಿಲ್ಲ. ಅವರೇ ಓಡೋಡಿ ಬಂದು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಭಾವನೆಯನ್ನು ನಾವು ತಡೆಯಲು ಸಾಧ್ಯವೇ? ಮಕ್ಕಳು, ರೈತರು, ಮಹಿಳೆಯರು, ಕಾರ್ಮಿಕರು ಸೇರಿ ಎಲ್ಲ ವರ್ಗದ ಜನರ ಜತೆಗಿನ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ ಎಂದು ನುಡಿದರು.

‘ರಾಹುಲ್ ಕೇವಲ ಒಂದು ಮಗು, ಒಬ್ಬ ಯುವಕ, ಒಬ್ಬ ರೈತ, ಕಾರ್ಮಿಕ, ಮಹಿಳೆ ಜತೆ ಮಾತನಾಡಿದ್ದಲ್ಲ. ಎಲ್ಲ ವರ್ಗದ ಜನ ಸಮೂಹದ ಜತೆ ಮಾತುಕತೆ ನಡೆಸಿದ್ದಾರೆ. ಅವರ ನೋವು, ಕಷ್ಟ, ಭಾವನೆ ಅರಿತು, ಮುಂದೆ ಜನ ಆಶೀರ್ವಾದ ಮಾಡಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವ ಚಿಂತನೆ ಅವರದಾಗಿದೆ. ಬಳ್ಳಾರಿಯಲ್ಲಿ ಯಾತ್ರೆ ಮುಕ್ತಾಯವಾಗಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೆ. ಸಂಸದ ಡಿ ಕೆ ಸುರೇಶ್, ಉಗ್ರಪ್ಪ, ಶಾಸಕ ನಾಗೇಂದ್ರ ಸೇರಿದಂತೆ ಕೆಲವು ನಾಯಕರನ್ನು ಯಾತ್ರಿಗಳೆಂದು ಪರಿಗಣಿಸಿ, ಅವರಿಗೆ ಇಲ್ಲೆ ಮತ ಚಲಾಯಿಸುವ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿದೆ. ಉಳಿದವರು ಬೆಂಗಳೂರಿನಲ್ಲಿ ಮತ ಚಲಾಯಿಸಲಿದ್ದಾರೆ' ಎಂದು ಸ್ಪಷ್ಟಪಡಿಸಿದರು.

‘ನನ್ನ ಮತ್ತು ಸಿದ್ದರಾಮಯ್ಯನವರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಬಹಳ ಸಂತೋಷ. ಯಡಿಯೂರಪ್ಪ, ಯತ್ನಾಳ್, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಲಿ. ಆದರೆ ಚಡ್ಡಿ ಹಾಕಿರುವ ಬಚ್ಚಾ ಮುಂದೆ ಪ್ಯಾಂಟು ಧರಿಸಿ, ಪಂಚೆ ಕಚ್ಚೆ ಕಟ್ಟಿ, ಕೆಲಸ ಮಾಡುತ್ತಿರುವವರನ್ನು ಜನ ಗಮನಿಸುತ್ತಿದ್ದಾರೆ. ಅವರ ವಯಸ್ಸಿನ ಮುಂದೆ, ಅವರ ಹಿರಿತನದ ಮುಂದೆ ನಾವು ಬಚ್ಚಾಗಳೇ. ಯಡಿಯೂರಪ್ಪ ಅವರನ್ನು ಏಕೆ ಅಧಿಕಾರದಿಂದ ತೆಗೆದಿರಿ ಎಂದು ರಾಹುಲ್ ಗಾಂಧಿ ಗೌರವಯುತವಾಗಿ ಕೇಳಿದ್ದಾರೆ. ಬಿಎಸ್‍ವೈಅದನ್ನು ಅರಿಯಬೇಕು' ಎಂದು ತಿರುಗೇಟು ನೀಡಿದರು.

‘ಯಾತ್ರೆ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಈ ಯಾತ್ರೆ ಯಶಸ್ಸಿನ ಶ್ರೇಯ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಸಲ್ಲಬೇಕು' ಎಂದ ಅವರು, ಪ್ರಿಯಾಂಕ್ ಗಾಂಧಿ ಅವರು ಸಿಮ್ಲಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಇಂದು ದಿಲ್ಲಿಗೆ ಹೋಗಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಯಾತ್ರೆ ಬಾಕಿ ಇದೆ. ಅವರ ಭಾಗವಹಿಸುವಿಕೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಯಾತ್ರೆಯಿಂದ ಪಕ್ಷಕ್ಕೆ ಶಕ್ತಿ ಬಂದಿದ್ದು, ನನ್ನ ಆರೋಗ್ಯ ಗಟ್ಟಿಯಾಗಿದೆ. ನನ್ನ ಅನುಭವ ಹೆಚ್ಚಾಯ್ತು. ನಾನು ರಾಜ್ಯ ಹಾಗೂ ಬೇರೆ ರಾಜ್ಯಗಳಲ್ಲೂ ಇಂತಹ ಹಲವು ಸಂಘಟನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಯಾತ್ರೆ ಮಾಡಿದ್ದೇನೆ. ಮೇಕೆದಾಟು ಯಾತ್ರೆ, ಸ್ವಾತಂತ್ರ್ಯ ನಡಿಗೆ ನೋಡಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬಂತೆ ಎಲ್ಲ ಕಾರ್ಯಕರ್ತರ, ನಾಯಕರನ್ನು ಸೇರಿಸಿ ಈ ಕಾರ್ಯಕ್ರಮ ಮಾಡಲಾಗಿದೆ' ಎಂದು ಅವರು ಹೇಳಿದರು.

‘ನಮ್ಮ ರಾಜ್ಯದವರೇ ಎಐಸಿಸಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಉತ್ಸುಕರಾಗಿ ಭಾಗವಹಿಸಲಿದ್ದಾರೆ. ಗಾಂಧಿ ಕುಟುಂಬ ಈ ಚುನಾವಣೆಯಲ್ಲಿ ಯಾವುದೇಹಸ್ತಕ್ಷೇಪ ಮಾಡದೆ ಪಕ್ಷದವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದು, ಈ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದೆ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X