ರಮೇಶ್ ಜಾರಕಿಹೊಳಿಗೆ ಶೀಘ್ರದಲ್ಲೇ ದೊಡ್ಡ ಜವಾಬ್ದಾರಿ: BJP ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಳಗಾವಿ: 'ಮುಂದಿನ ಚುನಾವಣೆ ಗೆಲ್ಲುವಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಪಾತ್ರ ಹಿರಿದಾಗಿದೆ. ಪಕ್ಷ ಅವರಿಗೆ ಶೀಘ್ರದಲ್ಲೇ ದೊಡ್ಡ ಜವಾಬ್ದಾರಿ ನೀಡಲಿದೆ' ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ರಮೇಶ್ ಜಾರಕಿಹೊಳಿ ಅವರ ವರ್ಚಸ್ಸಿದೆ. ಚುನಾವಣೆ ಬಳಿಕ ಬಿಜೆಪಿಯನ್ನ ಗಟ್ಟಿಗೊಳಿಸಲು ಅವರ ಯೋಗದಾನ ಮಹತ್ತರವಾಗಿದೆ. ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಮತಭೇದವಿಲ್ಲ'' ಎಂದರು.
''ಈಗಾಗಲೇ ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಸಹ ಬಿಜೆಪಿ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯ ಸಾಧಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಯತ್ನಾಳ್ ನಮ್ಮ ನಾಯಕನಲ್ಲ, ಬೆಲ್ಲದ್ ಹೇಳಿಕೆ ಒಪ್ಪಲ್ಲ: BJP ರಾಜ್ಯ ಉಸ್ತುವಾರಿ ಅರುಣ್ ಸಿಂಗ್
Next Story