Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ...

ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ17 Oct 2022 10:55 AM IST
share
ಸಮಯಪ್ರಜ್ಞೆ, ಸ್ಥಿತಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯೋಚಿತ ತೀರ್ಮಾನಗಳ ಮೂಲಕ ಜನರಿಗೆ ನೆರವಾಗಬೇಕು. ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಈಗ ಬಹಳಷ್ಟು ಅಧಿಕಾರಿಗಳು ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರ ಭಾಗವನ್ನಷ್ಟೇ ನೋಡುತ್ತಾರೆ. ಆ ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಸಿಎಂ ತಿಳಿಸಿದರು.

ನೀವು ಆಡಳಿತದ ಭಾಗವಾಗಿದ್ದೀರಿ. ನಿಮಗೆ ಹೆಚ್ಚಿನ ಅಧಿಕಾರವೂ ಇದೆ. ನೀವು ಕೈಗೊಳ್ಳುವ ನಿರ್ಣಯಗಳು ಆಡಳಿತ ನಿರ್ವಹಣೆಯಲ್ಲಿ ಬಹಳ ಮುಖ್ಯ ಎಂದು ತಿಳಿಸಿದರು. ಯಾವುದೇ ಕೆಲಸ ಮಾಡಬಾರದು ಅಂದುಕೊಂಡರೆ, 101 ಕಾರಣ ದೊರೆಯುತ್ತದೆ. ಒಂದು ಒಳ್ಳೆಯ ಕೆಲಸ ಮಾಡಬೇಕೆಂದರೆ ಒಂದೇ ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಸಲಹೆ ನೀಡಿದರು.

ಇಂದಿನ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಮುಕ್ತವಾಗಿ ತಮ್ಮ ಅನುಭವ ಹಂಚಿಕೊಳ್ಳಬೇಕು. ಆಗ ಸರ್ಕಾರ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ತಿಳಿಸಿದರು.

ಆಯವ್ಯಯ ಅನುಷ್ಠಾನ ಕುರಿತಂತೆ ಸರ್ಕಾರಿ ಆದೇಶಗಳಾಗಿದೆ. ತಳಹಂತದಲ್ಲಿ ಅವುಗಳ ಅನುಷ್ಠಾನಕ್ಕೆ ಕ್ರಮಗಳನ್ನು ಕೈಗೊಂಡು, ವರ್ಷಾಂತ್ಯದಲ್ಲಿ ಗುರಿ ಸಾಧಿಸುವಂತೆ ಸೂಚಿಸಿದರು.

ಸಚಿವರಾದ ಆರ್. ಅಶೋಕ್, ಜೆ.ಸಿ. ಮಾಧುಸ್ವಾಮಿ, ವಿ. ಸುನಿಲ್ ಕುಮಾರ್, ಸಿ.ಸಿ. ಪಾಟೀಲ್, ವಿ.ಸೋಮಣ್ಣ, ಬಿ.ಶ್ರೀರಾಮುಲು, ಕೆ. ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X