ಬೆಂಗಳೂರು | ರಸ್ತೆಗುಂಡಿಗೆ ಮತ್ತೊಂದು ಅವಘಡ; ಕೆಎಸ್ಸಾರ್ಟಿಸಿ ಬಸ್ ಹರಿದು ಮಹಿಳೆ ಸ್ಥಿತಿ ಗಂಭೀರ

(ಎಂಜಿ ರಸ್ತೆಯಲ್ಲಿರುವ ಗುಂಡಿಯನ್ನು ಕಲ್ಲುಗಳಿಂದ ಮುಚ್ಚುತ್ತಿರುವ ಪೊಲೀಸ್ ಸಿಬ್ಬಂದಿ)
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳೆಯೋರ್ವರು ಕೆಳಗೆ ಬಿದ್ದಿದ್ದು, ಈ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಹರಿದು ಗಂಭಿರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ರಾಜಾಜಿನಗರದ ಸುಜಾತ ಥಿಯೇಟರ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಮಹಿಳೆ ಮೇಲೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹರಿದು ಹರಿದಿದೆ. ಘಟನೆಯಲ್ಲಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಇವರ ಜೊತೆ ಇದ್ದ ಮಗಳು ವನಿತಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮಳೆಗೆ ನಗರದಲ್ಲಿ ಹೆಚ್ಚಿದ ರಸ್ತೆಗುಂಡಿಗಳು..!
Next Story





