ಉಡುಪಿ: ಕೌಶಲ್ಯ ತರಬೇತಿ ಕಾರ್ಯಾಗಾರ ಸಮಾರೋಪ

ಉಡುಪಿ, ಅ.17: ಸಮಾಜ ಕಲ್ಯಾಣ ಇಲಾಖೆ, ಉಡುಪಿ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ಬನ್ನಂಜೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿ ಕೊಳ್ಳ ಲಾಗಿದ್ದ ಜಿಲ್ಲೆಯ ಅಂತಿಮ ವರ್ಷದ ಪದವಿ ನಿಲಯದ ವಿದ್ಯಾರ್ಥಿನಿಯರಿಗೆ ಆರು ದಿನಗಳ ಕೌಶಲ್ಯ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂ ನಿನ್ನೆ ನಡೆಯಿತು.
ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ರಾಘವೇಂದ್ರ ಪ್ರಭು, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕಿ ವಿಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕಿ ಜಯಂತಿ ಹಾಗೂ ಇತರರು ಉಪಸ್ಥಿತರಿದ್ದರು.
ನಾಂದಿ ಫೌಂಡೇಶನ್ ತರಬೇತುದಾರರಾದ ಕಾವ್ಯ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಹಾಗೂ ಜಿಲ್ಲಾ ಸಲಹೆಗಾರ್ತಿ ಸಂಧ್ಯಾರಾಣಿ ಪ್ರಶಸ್ತಿ ಪತ್ರ ವಿತರಿಸಿದರು.
ನಿಲಯದ ಮೇಲ್ವಿಚಾರಕಿ ಸುಚಿತ್ರ ಸ್ವಾಗತಿಸಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಬನ್ನಂಜೆಯ ವಿದ್ಯಾರ್ಥಿನಿ ಸಂಗೀತ ಕಾರ್ಯಕ್ರಮ ನಿರೂಪಿಸಿದರು.

Next Story







