ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಕುಂದಾಪುರ, ಅ.17: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕೋಟೆಶ್ವರ ಗ್ರಾಮದ ಕೋಣಿ ರೋಡ್ ನಿವಾಸಿ ಜಯರಾಮ ಪೂಜಾರಿ (55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.16ರಂದು ಸಂಜೆ ವೇಳೆ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಫುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಗುಲ್ವಾಡಿ ಗ್ರಾಮದ ಸೌಕೂರು ಕುದ್ರು ರಾಜು ಮೊಗವೀರ ಎಂಬವರ ಮಗ ಸೂರಜ್ (20) ಎಂಬವರು ಅ.16ರಂದು ಸಂಜೆ ವೇಳೆ ಮನೆಯ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





