ಬಿಲ್ಕಿಸ್ ಬಾನು ಅತ್ಯಾಚಾರ ಆರೋಪಿಗಳ ಬಿಡುಗಡೆಯನ್ನು ಗೃಹ ಇಲಾಖೆ ಅನುಮೋದಿಸಿತ್ತು: ಗುಜರಾತ್ ಸರಕಾರ
"ಉತ್ತಮ ನಡತೆಯಿದ್ದ ಮತ್ತು ಶಿಕ್ಷೆ ಅವಧಿ ಮುಗಿದ ಕಾರಣ ಅವರನ್ನು ಬಂಧಮುಕ್ತಗೊಳಿಸಲಾಗಿದೆ"

ಹೊಸದಿಲ್ಲಿ: ಗುಜರಾತ್ ಸರ್ಕಾರಕ್ಕೆ ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ಅನುಮೋದನೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್ ನಲ್ಲಿ ಹೇಳಿದೆ.
ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳು 14 ವರ್ಷಗಳ ಶಿಕ್ಷೆಯನ್ನು ಪೂರ್ಣಗೊಳಿಸಿದ ಕಾರಣ ಮತ್ತು ಅವರ ನಡವಳಿಕೆ ಉತ್ತಮವಾಗಿ ಕಂಡುಬಂದಿದ್ದರಿಂದ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಗುಜರಾತ್‌ನ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳು ಸೋಮವಾರ ಗೋಧ್ರಾ ಉಪ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
Next Story





