ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳ ಸಭೆ

ಬೆಂಗಳೂರು, ಅ.17:‘ ದಿಢೀರ್ ಭೇಟಿ ನೀಡುವ ಮೂಲಕ ಆಡಳಿತಕ್ಕೆ ಚುರುಕು ಮುಟ್ಟಿಸಬೇಕು. ಜನರ ಪರವಾಗಿ ಕೆಲಸಮಾಡಲು ಹಿಂದೆ-ಮುಂದೆ ನೋಡಬೇಡಿ. ಯೋಜನೆಗಳ ಅನುಷ್ಠಾನದಲ್ಲಿ ತೊಡಕುಗಳನ್ನು ಗಮನಕ್ಕೆ ತನ್ನಿ. ಆದರೆ,ಯಾವುದೇ ಕಾರಣಕ್ಕೂ ವಿಳಂಬ ಮಾಡಬೇಡಿ. ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಒತ್ತು ನೀಡಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಓಗಳ ಸಭೆಯಲ್ಲಿ ನಡೆಸಿದರು. ‘ಸಭೆಯಲ್ಲಿ ನೀಡಿರು ವಸಲಹೆ-ನಿರ್ದೇಶನಗಳು ಸಂಪೂರ್ಣ ಕಾರ್ಯಗತ ಗೊಳಿಸಬೇಕು. ಅನುಷ್ಠಾನದ ಹಂತದಲ್ಲಿ ಅನುಭವಗಳನ್ನು ಹಂಚಿಕೊಳ್ಳಬೇಕು. ಕ್ರಿಯಾಶೀಲರಾಗಿ, ಜನಸ್ನೇಹಿಗಳಾಗಿ ಕೆಲಸ ಮಾಡಬೇಕು. ಜಿಲ್ಲೆಗಳಲ್ಲಿಪ್ರವಾಸಮಾಡಬೇಕು. ಕ್ಷೇತ್ರಮಟ್ಟದಲ್ಲಿಪರಿಶೀಲನೆನಡೆಸಬೇಕು' ಎಂದು ನಿರ್ದೇಶನ ನೀಡಿದರು.
‘ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಸರಕಾರದ ಮೇಲೆವಿಶ್ವಾಸಮೂಡಲುಸಾಧ್ಯ. ನೀವುಹೆಚ್ಚಿನ ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕು. ಆಯವ್ಯಯ ಅನುಷ್ಠಾನ ಅತಿ ಮುಖ್ಯ.ಶಾಲಾ ಕಟ್ಟಡ, ವಿದ್ಯಾರ್ಥಿನಿಲಯನಿರ್ಮಾಣ, ಯಶಸ್ವಿನಿ ಯೋಜನೆ, ಅಮೃತ್ ಯೋಜನೆ, ಮತ್ತಿತರ ಮಹತ್ವಾಕಾಂಕ್ಷಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಸ್ಥೆ ವಹಿಸಬೇಕು' ಎಂದು ಅವರು ಸಲಹೆ ನೀಡಿದರು.
ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಅಧಿನಿಯಮದಡಿ ದಾಖಲಾಗಿರುವ ಕೊಲೆಪ್ರಕರಣಗಳಲ್ಲಿ, ಮೃತರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರಕಾರಿ ನೌಕರಿ ನೀಡಲುಬಾಕಿ ಇರುವ ಪ್ರಸ್ತಾವನೆಗಳನ್ನು ಪ್ರಾದೇಶಿಕ ಆಯುಕ್ತರು ತ್ವರಿತವಾಗಿ ವಿಲೇವಾರಿಗೊಳಿಸಲು ತಿಳಿಸಿದರು. ಜಿಲ್ಲಾಧಿಕಾರಿಗಳೂ ಪ್ರಸ್ತಾವನೆಗಳನ್ನು ಸಲ್ಲಿಸುವಾಗ ಪೂರ್ಣ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದರು.
‘ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ.ಸಿಇಓಗಳ ಸುದೀರ್ಘ ಸಭೆ ನಡೆಸಲಾಗಿದ್ದು, ಆಡಳಿತ ಸುಧಾರಣೆ ಮತ್ತು ಬಜೆಟ್ ಘೋಷಿತ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಹಾಗೂ ಫಲಾನುಭವಿಗಳಿಗೆ ಯೋಜನೆಗಳ ಪ್ರತಿಫಲ ತ್ವರಿತಗತಿಯಲ್ಲಿ ದೊರಕಿಸಿಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನಬಿಟ್ಟು ತಾಲೂಕು ಕೇಂದ್ರಗಳಿಗೆ ಖುದ್ದು ಭೇಟಿ ನೀಡಲು ಸೂಚನೆ ನೀಡಲಾಗಿದೆ.ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಯೋಜನೆಗಳ ಅನುಷ್ಟಾನಕ್ಕೆ ನಿರ್ದೇಶನ ನೀಡಲಾಗಿದೆ'
-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ
=====================================
‘ಕೃಷಿ ಯಂತ್ರೋಪಕರಣಗಳ ಸಮಪರ್ಕ ಬಳಕೆ ದೃಷ್ಟಿಯಿಂದ ರೈತರು ಆನ್‍ಲೈನ್ ಮತ್ತು ನೇರವಾಗಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜತೆಗೆ ಜಿಲ್ಲಾಸ್ಪ್ರತೆಗಳ ಮೇಲಿನ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ತಾಯಿ-ಮಗು ಆರೋಗ್ಯ ಸುರಕ್ಷತೆ ಕುರಿತು ಜನರಲ್ಲಿ ವಿಶ್ವಾಸ ಮೂಡಿಸಲು ಸೂಚನೆ ನೀಡಲಾಗಿದೆ. ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಆಗಲೇಬೇಕು. ಅಧಿಕಾರಿಗಳು ವಿಳಂಬ ಧೋರಣೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ'
-ಮಾಧುಸ್ವಾಮಿ ಕಾನೂನು ಸಚಿವ