ಹೊಸ ಶಾಲೆಗಳ ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅ. 17: ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯನ್ನು ಪ್ರಾರಂಭಿಸಲು ಉದ್ದೇಶಿಸಿರುವ ಶಾಲಾ ಆಡಳಿತ ಮಂಡಳಿಗಳು ನೋಂದಣಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅನ್‍ಲೈನ್ ಅರ್ಜಿಗಳನ್ನು ಸಲ್ಲಿಸಲು ಡಿ.12ರವರೆಗೂ ಅವಕಾಶವಿದ್ದು, ನ.4ರಂದು ತಂತ್ರಾಂಶವನ್ನು ಬಿಡುಗಡೆ ಮಾಡಲಾಗುವುದು. ಕರ್ನಾಟಕ ಶಿಕ್ಷಣ ಕಾಯ್ದೆಗಳ ಅನ್ವಯ ಖಾಸಗಿ ಶಾಲೆಗಳ ನೋದಣಿಯನ್ನು ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.
Next Story





