ಬೈಂದೂರು ಸರಕಾರಿ ಕಾಲೇಜಿನಲ್ಲಿ ಡಾ. ಬಿಆರ್ ಅಂಬೇಡ್ಕರ್ ಓದು

ಉಡುಪಿ, ಅ.17: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇವರ ಸಹಯೋಗದೊಂದಿಗೆ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾಮಾಜಿಕ ಚಿಂತಕ ನಾರಾಯಣ ಮಣೂರು, ರಾಜಪ್ರಭುತ್ವದಿಂದ ಪ್ರಜಾ ಪ್ರಭುತ್ವದ ಪರಿಕಲ್ಪನೆಯ ಕನಸು ಕಂಡವರು ಡಾ.ಬಾಬಾಸಾಹೇಬ್ ಅಂಬೇಡ್ಕರ್. ಮೀಸಲಾತಿ ಮಾತ್ರವಲ್ಲದೆ ಅನೇಕ ಸೌಲಭ್ಯಗಳಿಗೆ ಕಾರಣಿಭೂತವಾದ ಕಾನೂನು ಜಾರಿಯಾಗಲು ಹಾಗೂ ಆರ್ಥಿಕ ಅಭಿವೃದ್ಧಿ, ನೀರಾವರಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಬದುಕಿನ ಸಕಾರಾತ್ಮಕ ಬದಲಾವಣೆಗಳಿಗೆ ಅಂಬೇಡ್ಕರ್ ಶ್ರಮಿಸಿದ ಬಗೆಯನ್ನು ಅವರು ವಿವರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ,ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ಘಟಕದ ಅಧ್ಯಕ್ಷ ಹಾಗೂ ಪ್ರಾಂಶುಪಾಲ ಡಾ.ರಘು ನಾಯ್ಕ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಕಾರ್ಯಕ್ರಮದ ಸಂಚಾಲಕ ಡಾ.ಸಣ್ಣಚಿಕ್ಕಯ್ಯ, ಕನ್ನಡ ವಿಭಾಗ ಮುಖ್ಯಸ್ಥ ನಾಗರಾಜ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾ ಗಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಪುಸ್ತಕ, ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಎಚ್‌ಜೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







