Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ...

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ17 Oct 2022 9:58 PM IST
share
ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಆಯ್ಕೆ

ಬಂಟ್ವಾಳ, ಅ.17: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 12 ಮತ್ತು 13ರಂದು ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ.ಬಾಲಕೃಷ್ಣ ಗಟ್ಟಿ ಆಯ್ಕೆಯಾಗಿದ್ದಾರೆ. 

ಬಂಟ್ವಾಳದ ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಅ.17ರಂದು ನಡೆದ ಪತ್ರಕರ್ತರೊಂದಿಗಿನ ಮಾತುಕತೆ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಅವರು ಆಯ್ಕೆಯನ್ನು ಪ್ರಕಟಿಸಿದರು. 

ಕಸಾಪ ಹಲವು ಸಮಾಜಮುಖಿ ಕಾರ್ಯಯೋಜನೆಯನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು ಬೆಳಕಿಗೆ ಬಾರದ ಪ್ರತಿಭೆಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಹೇಳಿದ ಅವರು, ಬಂಟ್ವಾಳ ತಾಲೂಕಿನಲ್ಲಿ ದಿನಪತ್ರಿಕೆಯೊಂದನ್ನು ಸ್ಥಾಪಿಸಿ, ಸ್ಥಳೀಯ ಹಲವು ಪ್ರತಿಭೆಗಳು ಬೆಳಕಿಗೆ ಬರಲು ಕಾರಣರಾದ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಮಾಧ್ಯಮರಂಗದಲ್ಲಿ ಗಣನೀಯ ಸಾಧನೆ ಮಾಡಿದ ಪ್ರೊ. ಗಟ್ಟಿಯವರನ್ನು ಈ ಬಾರಿ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದ್ದು ಮಾಧ್ಯಮ ಕ್ಷೇತ್ರಕ್ಕೆ ಕಸಾಪ ನೀಡುವ ಗೌರವವೂ ಹೌದು ಎಂದರು. 

ಈ ಸಂದರ್ಭ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಅಮ್ಮುಂಜೆಯಲ್ಲಿ ನಡೆಯಲಿರುವ ಸಮ್ಮೇಳನದ ವಿವರಗಳನ್ನು ನೀಡಿದರು. ಕಸಾಪ ಗೌರವ ಪ್ರಧಾನ ಕಾರ್ಯದರ್ಶಿ ವಿ.ಸು.ಭಟ್, ರಮಾನಂದ ನೂಜಿಪ್ಪಾಡಿ, ಕೋಶಾಧಿಕಾರಿ ಡಿ.ಬಿ.ಅಬ್ದುಲ್ ರಹಮಾನ್, ಪದಾಧಿಕಾರಿಗಳಾದ ಗಣೇಶ ಪ್ರಸಾದ ಪಾಂಡೇಲು, ಚೇತನ್ ಮುಂಡಾಜೆ, ಗೋಪಾಲ ಅಂಚನ್, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ,  ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಸಂಚಾಲಕ ಅಬುಬಕರ್ ಅಮ್ಮುಂಜೆ,  ಪ್ರಧಾನ ಕಾರ್ಯದರ್ಶಿ ಜನಾರ್ದನ ಅಮ್ಮುಂಜೆ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಸಹಿತ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು. 

ಪ್ರೊ.ಬಾಲಕೃಷ್ಣ ಗಟ್ಟಿ: 79ರ ಹರೆಯದ ಪ್ರೊ.ಗಟ್ಟಿ, ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ. ಪ್ರಾಧ್ಯಾಪಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿದ್ದು, ಮಂಗಳೂರು ವಿವಿ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಪತ್ರಕರ್ತರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಪ್ರೊ. ಗಟ್ಟಿ ಅವರು, 1996ರಲ್ಲಿ ಬಂಟ್ವಾಳದಲ್ಲಿ ನೇತ್ರಾವತಿ ವಾರ್ತೆ ಎಂಬ ಪತ್ರಿಕೆ ಹೊರಡಿಸಿ, ಅದರ ಸಂಪಾದಕರಾಗಿ ಸ್ಥಳೀಯ ಹಲವು ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದವರು. 1980ರಿಂದ 1998ರವರೆಗೆ ಬಂಟ್ವಾಳ ತಾಲೂಕು ವರದಿಗಾರರಾಗಿ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ಸೇವೆ ಸಲ್ಲಿಸಿದ್ದಾರೆ. 1998ರಿಂದ 2003ರವರೆಗೆ ಜನವಾಹಿನಿ ಕನ್ನಡ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ಅವರು, ತಾಲೂಕು ಉಚಿತ ಕಾನೂನು ನೆರವು ಸಮಿತಿ ಸದಸ್ಯರಾಗಿದ್ದರು. 

ಬಂಟ್ವಾಳ ತಾಲೂಕಿನಲ್ಲಿ ಪತ್ರಕರ್ತರ ಸಂಘದ ಸ್ಥಾಪನೆಗೆ ಕಾರಣಕರ್ತರಲ್ಲೊಬ್ಬರಾಗಿದ್ದ ಪ್ರೊ. ಗಟ್ಟಿ, ಅವರು ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸ್ವರ್ಣರಥದ ವಿಶೇಷ ಸಂಚಿಕೆಯ ಸಂಪಾದಕರಾಗಿದ್ದ ಡಾ. ಗಟ್ಟಿ ಸೃಜನಶೀಲ ಪ್ರತಿಭೆಗಳಿಗೆ ಪ್ರೋತ್ಸಾಹಕರಾಗಿದ್ದವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X