ಸಕಲೇಶಪುರ: ಪಿಕಪ್ - ಮಾರುತಿ ಓಮ್ನಿ ನಡುವೆ ಢಿಕ್ಕಿ: ನಾಲ್ವರಿಗೆ ಗಾಯ

ಸಕಲೇಶಪುರ: ಪಿಕಪ್ ಮತ್ತು ಮಾರುತಿ ಓಮ್ನಿ ನಡುವೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಪಟ್ಟಣದ ತೇಜಸ್ವಿ ಚಿತ್ರಮಂದಿರದ ಬಳಿ ರಾತ್ರಿ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಮಾರುತಿ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ತಾಲೂಕಿನ ಆಚಂಗಿ ಗ್ರಾಮದ ನಿವಾಸಿಗಳಾದ ಜೀರಾಜ್, ಮುತ್ತು ರಾಜ್, ಅಭಿಷೇಕ್ ಮತ್ತು ಡೇವಿನ್ ಗಾಯಗೊಂಡಿರುವ ವ್ಯಕ್ತಿಗಳಾಗಿದ್ದಾರೆ. ಢಿಕ್ಕಿ ಹೊಡೆದ ರಭಸಕ್ಕೆ ಮಾರುತಿ ಓಮ್ನಿ ನುಜ್ಜುಗುಜ್ಜಾಗಿದ್ದು , ತರಕಾರಿ ತುಂಬಿದ ವಾಹನ ಹೆದ್ದಾರಿಯಲ್ಲಿ ಉರುಳಿಬಿದ್ದಿದೆ.
ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತಿಭಾ ಎಲ್, ಡಿವೈಎಸ್ಪಿ ಮಿಥುನ್, ಸಬ್ ಇನ್ಸ್ಪೆಕ್ಟರ್ ಹಾಗೂ ಜೈಶಂಕರ್ ಅವರಯ ಘಟನಾ ಸ್ಥಳಕ್ಕೆ ಧಾವಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.