ಕೇದಾರನಾಥ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ, ಆರು ಮಂದಿ ಮೃತ್ಯು

Photo: Twitter/@ANI
ಡೆಹ್ರಾಡೂನ್: ಇಂದು ಉತ್ತರಾಖಂಡದಲ್ಲಿ ಕೇದಾರನಾಥ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಇಬ್ಬರು ಪೈಲಟ್ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಾಖಂಡದ ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಕೇದಾರನಾಥದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ ನಡೆದಿದೆ
ಹವಾಮಾನ ವೈಪರೀತ್ಯದಿಂದ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಹಾಗೂ ಪೊಲೀಸರು ಧಾವಿಸಿದ್ದಾರೆ.
#WATCH | Uttarakhand: A helicopter carrying Kedarnath pilgrims from Phata crashes, casualties feared; administration team left for the spot for relief and rescue work. Further details awaited pic.twitter.com/sDf4x1udlJ
— ANI (@ANI) October 18, 2022
Next Story







