Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಖ್ಯಮಂತ್ರಿಯವರೇ ಸೂಚಿಸಿದ ಕೆಲಸವೂ ಈ...

ಮುಖ್ಯಮಂತ್ರಿಯವರೇ ಸೂಚಿಸಿದ ಕೆಲಸವೂ ಈ ಸರಕಾರದಲ್ಲಿ ಆಗುತ್ತಿಲ್ಲ: ಸಿದ್ದರಾಮಯ್ಯ ಟೀಕೆ

ವಾರ್ತಾಭಾರತಿವಾರ್ತಾಭಾರತಿ18 Oct 2022 3:23 PM IST
share
ಮುಖ್ಯಮಂತ್ರಿಯವರೇ ಸೂಚಿಸಿದ ಕೆಲಸವೂ ಈ ಸರಕಾರದಲ್ಲಿ ಆಗುತ್ತಿಲ್ಲ: ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಅ.18: ಸುಳ್ಳು ಭರವಸೆ ನೀಡುವುದರಲ್ಲಿ ನಿಸ್ಸೀಮನಾಗಿರುವ ಬಿಜೆಪಿ ಸರಕಾರ ಮಳವಳ್ಳಿ ಜಲಕ್ರಾಂತಿಯ ಕಾಮೇಗೌಡ ಅವರ ಪುತ್ರನಿಗೆ ಸರಕಾರಿ ಉದ್ಯೋಗ ಕೊಡುವ ಭರವಸೆಯನ್ನೂ ಈಡೇರಿಸಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ನಲ್ಲಿ ಕಾಮೇಗೌಡರ ಜಲಕ್ರಾಂತಿಯನ್ನು ಪ್ರಸ್ತಾಪಿಸಿದ್ದರು. ಬಳಿಕ 2020ರ ಜುಲೈ 2ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸರ್ಕಾರಿ ನೌಕರಿ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಇದಾಗಿ ಎರಡು ವರ್ಷಗಳು ಕಳೆದು ಕಾಮೇಗೌಡರು ನಿಧನರಾದರೂ ಇವರ ಪುತ್ರನಿಗೆ ಸರ್ಕಾರ ಕೆಲಸ ನೀಡಲಾಗಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ತಮ್ಮ ಜಮೀನು ಮತ್ತು ಸುತ್ತಮುತ್ತಲ ಸ್ಥಳಗಳಲ್ಲಿ 16 ಸಣ್ಣ ಕೆರೆ ಕಟ್ಟೆಗಳನ್ನು ನಿರ್ಮಿಸಿ ಸದ್ದಿಲ್ಲದೆ ಪರಿಸರ ಸೇವೆಯಲ್ಲಿ ಮತ್ತು ರೈತ ಸಮುದಾಯಕ್ಕೆ ನೆರವಾಗುವ ಕಾರ್ಯ ಮಾಡಿದ್ದನ್ನು ಯಾರೂ ಮರೆಯುವಂತಿಲ್ಲ. ಈ ಕಾರ್ಯವನ್ನು ಪ್ರಧಾನಿ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದು ಸ್ವಾಗತಾರ್ಹ. ಆದರೆ ಆ ಬಳಿಕ ಒಂದೇ ಬಿಜೆಪಿ ಸರ್ಕಾರದ ಇಬ್ಬರು ಮುಖ್ಯಮಂತ್ರಿಗಳು ಬಂದರೂ ಇಬ್ಬರ ಅವಧಿಯಲ್ಲೂ ಕಾಮೇಗೌಡರ ಪುತ್ರನಿಗೆ ಸರಕಾರಿ ಕೆಲಸ ಒದಗಿಸಲು ಸಾಧ್ಯವಾಗಿಲ್ಲ. ಇದು ಮನ್ ಕಿ ಬಾತ್ ಮತ್ತು ಸರಕಾರದ ನಕಲಿತನಕ್ಕೆ ಸಾಕ್ಷಿಯಾಗಿದೆ.

ಕಾಮೇಗೌಡರ ಪುತ್ರನಿಗೆ ಸರ್ಕಾರಿ ಕೆಲಸ ಎಂದು ಬಿಜೆಪಿ ಸರ್ಕಾರ ಭರ್ಜರಿ ಪ್ರಚಾರ ಗಿಟ್ಟಿಸಿತ್ತು. ಪ್ರಚಾರದ ಬಳಿಕ ಏನಾದರೂ ಕೆಲಸ ಆಗಿದೆಯೇ ಎಂದು ಪರೀಕ್ಷಿಸಿದರೆ ಏನೇನೂ ಆಗಿಲ್ಲ. ಕಾಮೇಗೌಡರ ಇಬ್ಬರು ಪುತ್ರರಲ್ಲಿ ಒಬ್ಬನಿಗೆ ಕೆಲಸ ಕೊಡುವುದಿರಲಿ, ಇವರ ಕುಟುಂಬದ ವಾರ್ಷಿಕ ಆದಾಯ-ಮತ್ತಿತರೆ ವಿವರಗಳನ್ನು ಸಂಗ್ರಹಿಸುವುದಕ್ಕೂ ಇಬ್ಬರು ಮುಖ್ಯಮಂತ್ರಿಗಳ ಅವಧಿಯಲ್ಲೂ ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾಮೇಗೌಡರ ಕುಟುಂಬದ ಆದಾಯ ಮತ್ತು ಇತರ ವಿವರಗಳನ್ನು ಒದಗಿಸುವಂತೆ ಕೋರಿ ಮಂಡ್ಯ ಜಿಲ್ಲಾಧಿಕಾರಿಗೆ ಇದುವರೆಗೂ ಆರು ಪತ್ರಗಳನ್ನು ಬರೆದಿದೆ. 2020 ರಿಂದ 2021ರ ಡಿಸೆಂಬರ್‌ವರೆಗೂ ಒಟ್ಟು ಆರು ಪತ್ರಗಳನ್ನು ಮಂಡ್ಯ ಜಿಲ್ಲಾಧಿಕಾರಿಯ ಕಚೇರಿಗೆ ಬರೆಯಲಾಗಿದೆ. ಕೊನೆಯ ಪತ್ರದಲ್ಲಿ “ಅವಶ್ಯವಿರುವ ವರದಿಯನ್ನು ನೀಡಲು ಒಂದು ವರ್ಷಕ್ಕೂ ಹೆಚ್ಚಿನ ಅವಧಿಗೆ ಸ್ಪಂದಿಸದಿರುವುದು ವಿಷಾದಕರ”ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅವರು ಪ್ರಸ್ತಾಪಿಸಿದ್ದಾರೆ. ಆದರೂ ಮಂಡ್ಯ ಜಿಲ್ಲಾಧಿಕಾರಿಯಿಂದ ಇದುವರೆಗೂ ಸರ್ಕಾರಕ್ಕೆ ವರದಿ ಬಂದಂತೆ ಕಾಣುತ್ತಿಲ್ಲ. ಕಾಮೇಗೌಡರ ಕುಟುಂಬಕ್ಕೆ ಸರ್ಕಾರಿ ಕೆಲಸ ಸಿಕ್ಕಿಲ್ಲ. ಇದು ಸರ್ಕಾರದ ಕಾರ್ಯಕ್ಷಮತೆಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದರು.

ಮುಖ್ಯಮಂತ್ರಿಯವರೇ ಸೂಚಿಸಿದ ಕೆಲಸವೂ ಕೂಡ ಈ ಸರ್ಕಾರದಲ್ಲಿ ಆಗುವುದಿಲ್ಲ. ಬಹುಶಃ 40% ಕಮಿಷನ್ ಸಿಗದ ಕಾರಣಕ್ಕೆ ಸರ್ಕಾರದ ಕಾರ್ಯಕ್ಷಮತೆ ಕುಸಿದಿರಬಹುದು ಎನ್ನುವ ಅನುಮಾನ ಈ ಪ್ರಕರಣದಲ್ಲೂ ಗೋಚರಿಸುತ್ತಿದೆ.

ಕಾಮೇಗೌಡರು ಬದುಕಿರುವವರೆಗಾದರೂ ತಮ್ಮ ಮಕ್ಕಳಿಗೆ ಸರ್ಕಾರಿ ಉದ್ಯೋಗ ನೀಡುವ ಸರ್ಕಾರದ ಭರವಸೆ ಈಡೇರಿದ್ದನ್ನು ನೋಡಲು ಸಾಧ್ಯವಾಗಲಿಲ್ಲ. ಈಗ ಕಾಮೇಗೌಡರ ನಿಧನದ ಬಳಿಕವಾದರೂ ಈ ಕುಟುಂಬಕ್ಕೆ ಸರ್ಕಾರದ ನೆರವು ಸಿಗಬೇಕು. ಆದ್ದರಿಂದ ಸರ್ಕಾರದ ಭರವಸೆ ಕೇವಲ ಪೇಪರ್ ಮೇಲೆ ಮಾತ್ರ ಉಳಿಯಬಾರದು. ಆದಷ್ಟು ಬೇಗ ಕಾಮೇಗೌಡರ ಕುಟುಂಬದ ವಿವರಗಳನ್ನು ಸರ್ಕಾರ ತರಿಸಿಕೊಂಡು ಅಗತ್ಯ ನೆರವನ್ನು ಒದಗಿಸಬೇಕು. ಒಬ್ಬ ಪುತ್ರನಿಗೆ ಸರ್ಕಾರಿ ಕೆಲಸ ನೀಡಬೇಕು. ಆರು ಬಾರಿ ಪತ್ರ ಬರೆದರೂ ವರದಿ ನೀಡದ ಮಂಡ್ಯ ಜಿಲ್ಲಾಧಿಕಾರಿ ಮತ್ತು ಇತರರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X