Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ...

ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಸಿಎಂ ಬೊಮ್ಮಾಯಿ

ಬೀದರ್ | ಔರಾದ್‌ನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ18 Oct 2022 3:32 PM IST
share
ಕಾಂಗ್ರೆಸ್ ಭ್ರಷ್ಟಾಚಾರದ ಸಮಗ್ರ ದಾಖಲೆ ರಾಹುಲ್ ಗಾಂಧಿಗೆ ರವಾನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಅ.18: ಕಾಂಗ್ರೆಸ್ ಭ್ರಷ್ಟಾಚಾರ, ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ- ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ರವಾನಿಸುತ್ತೇನೆ. ಅವರು ಏನು ಮಾಡುತ್ತಾರೆಂದು ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲೆಸೆದರು.

ಬೀದರ್ ಜಿಲ್ಲೆಯ ಔರಾದ್ ನಲ್ಲಿ ಇಂದು ‘ಜನಸಂಕಲ್ಪ’ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯ ಹಗರಣಗಳ ವಿವರವನ್ನು ರಾಹುಲ್ ಗಾಂಧಿಗೆ ಕಳುಹಿಸಿ ಕೊಡಲಿದ್ದೇವೆ. 2016ರ ಶಿಕ್ಷಕರ ನೇಮಕಾತಿ ಹಗರಣ ಸೇರಿ ಎಲ್ಲ ವಿವರ ಕೊಡಲಿದ್ದೇವೆ. ಅರ್ಜಿ ಹಾಕದೇ ನೇಮಕಾತಿ ನಡೆದಿದೆ ಎಂದು ಆರೋಪಿಸಿದರು.

ಪ್ರಾಸಿಕ್ಯೂಟರ್ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲೂ ಹೀಗೇ ಆಗಿತ್ತು. ಎಲ್ಲ ಹಗರಣಗಳನ್ನು ಮುಚ್ಚಿ ಹಾಕಿದ್ದರು. ಇದು ಕಾಂಗ್ರೆಸ್ ಸರಕಾರ ಎಂದು ತಿಳಿಸಿದರು. ನಮ್ಮಲ್ಲಿ ಪಿಎಸ್ಸೈ ನೇಮಕಾತಿ ಆದಾಗ ತಪ್ಪು ಮಾಡಿದ್ದವರನ್ನು ಬಂಧಿಸಿದ್ದೇವೆ. ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರೆ. ಅಬ್ಬರಿಸಿ ಬೊಬ್ಬಿರಿದರೆ ಕೇಳುವವರು ಯಾರಿಲ್ಲ ಎಂದರು.

ಅತಿವೃಷ್ಟಿ ಸಂಬಂಧ ಪರಿಹಾರವನ್ನು ನಾವು ಹೆಚ್ಚಿಸಿದ್ದೇವೆ. ಮನೆಗಳ ಸಂಬಂಧ ಪರಿಹಾರ ಮೊತ್ತವನ್ನೂ ಹೆಚ್ಚಿಸಿದ್ದು, ಕಾಂಗ್ರೆಸ್ ಸರಕಾರದಲ್ಲಿ ಒಂದರಿಂದ ಒಂದೂವರೆ ವರ್ಷದಲ್ಲಿ ಪರಿಹಾರ ಕೊಡುತ್ತಿತ್ತು. ಈಗ ಕೇವಲ ಒಂದು ತಿಂಗಳಿನಲ್ಲಿ ಪರಿಹಾರ ನೀಡುತ್ತಿದ್ದೇವೆ ಎಂದರು.

ತಾಂಡಾಗಳ ಅಭಿವೃದ್ಧಿ, ಬಡವರಿಗೆ ನೆರವಾಗಿದ್ದೇವೆ. 23 ಸಾವಿರ ತಾಂಡಾಗಳನ್ನು ಗ್ರಾಮಗಳನ್ನಾಗಿ ಆದೇಶ ಮಾಡಲಾಗಿದೆ. ಮನೆಗಳಿಗೆ ಹಕ್ಕಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದ ಅವರು, ಕಲ್ಯಾಣ ಕರ್ನಾಟಕಕ್ಕೆ 3 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಕಾಮಗಾರಿ ಆರಂಭವಾಗುತ್ತಿದೆ. ಮುಂದಿನ ಬಜೆಟ್‍ನಲ್ಲಿ 5 ಸಾವಿರ ಕೋಟಿ ರೂ. ನೀಡಲಿದ್ದೇವೆ. ಅದಕ್ಕಾಗಿ ಕ್ರಿಯಾ ಯೋಜನೆಯನ್ನೂ ಮಾಡಿದ್ದೇವೆ. 14 ಸಾವಿರ ನೇಮಕಾತಿಗೆ ಅನುಮತಿ ಕೊಟ್ಟಿದ್ದೇವೆ ಎಂದು ವಿವರಿಸಿದರು.

ಕೇಂದ್ರ ಸಚಿವ ಭಗವಂತ್ ಖೂಬಾ ಅವರು ಮಾತನಾಡಿ, ಒಂದು ವರ್ಷ ಮೂರು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದಾರೆ. ಈ ಭಾಗದ ನನೆಗುದಿಗೆ ಬಿದ್ದಿದ್ದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.

 ರಾಜ್ಯದ ಸಚಿವರಾದ ಪ್ರಭು ಚೌಹಾಣ್, ಗೋವಿಂದ ಕಾರಜೋಳ, ಬೈರತಿ ಬಸವರಾಜ್, ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X