ಅ.22ಕ್ಕೆ ಬ್ರಹ್ಮಾವರದಲ್ಲಿ ಕೃಷಿ ಮಹೋತ್ಸವ

ಉಡುಪಿ, ಅ.18: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶವ್ವಿದ್ಯಾಲಯ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣಕನ್ನಡ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ, ಮುಖ್ಯಮಂತ್ರಿಗಳ ನೈಸರ್ಗಿಕ ಕೃಷಿ ಯೋಜನೆ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮಹೋತ್ಸವ ಕಾರ್ಯಕ್ರಮ ಅ.22ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





