ಉಡುಪಿ: ಜನವರಿಯಲ್ಲಿ ಗ್ಯಾರೇಜ್ ಕಾರ್ಮಿಕರ ಬೃಹತ್ ಸಮಾವೇಶ

ಉಡುಪಿ, ಅ.18: ಮುಂಬರುವ ಜನವರಿ ತಿಂಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ಯಾರೇಜ್ ಮಾಲಕ ಹಾಗೂ ಕಾರ್ಮಿಕರ ಒಂದು ದಿನದ ಬೃಹತ್ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಉಡುಪಿ ಮತ್ತು ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ಚಯರ್ ಮ್ಯಾನ್ ಪುಂಡಲೀಕ ಸುವರ್ಣ ತಿಳಿಸಿದ್ದಾರೆ.
ಉಡುಪಿಯಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಮಾಸಿಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಈ ಕ್ಷೇತ್ರದಲ್ಲಿ ದುಡಿಯುವ ವರ್ಗಗಳ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದವರು ತಿಳಿಸಿದರು.
ಸಮಾವೇಶದಲ್ಲಿ ಭಾಗವಹಿಸುವಂತೆ ರಾಜ್ಯದ ಮುಖ್ಯಮಂತ್ರಿ ಹಾಗೂ ಕಾರ್ಮಿಕ ಸಚಿವರು ಸೇರಿದಂತೆ ಉಭಯ ಜಿಲ್ಲೆಗಳ ಸಮಸ್ತ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು ಎಂದ ಅವರು, ಆಹ್ವಾನಿತರೆಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಮಾಜಿ ಅಧ್ಯಕ್ಷ ದಿವಾಕರ್, ಪದಾಧಿಕಾರಿಗಳಾದ ಕಿಶೋರ್, ಸತೀಶ್ ಶೆಟ್ಟಿ, ಉಡುಪಿ ವಲಯದ ಉಪಾಧ್ಯಕ್ಷ ರಾಜೇಶ್ ಜತ್ತನ್, ವಿನಯ ಕುಮಾರ್ ಭಾಗವಹಿಸಿದ್ದರು.
ಸಂಘದ ಗೌರವ ಸಲಹೆಗಾರರಾದ ಪ್ರಭಾಕರ, ಯಾದವ ಶೆಟ್ಟಿಗಾರ್, ಜಯ ಸುವರ್ಣ, ಕೋಶಾಧಿಕಾರಿ ಸಂತೋಷ್ ಕುಮಾರ್ ಮತ್ತು ಪದಾಧಿಕಾರಿಗಳು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ ಕಾರ್ಯಕ್ರಮ ನಿರೂಪಿಸಿದರು.







