Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪರಿಶಿಷ್ಟರಿಗೆ ಕಾಯ್ದಿರಿಸಿದ ಜಮೀನಿನಲ್ಲಿ...

ಪರಿಶಿಷ್ಟರಿಗೆ ಕಾಯ್ದಿರಿಸಿದ ಜಮೀನಿನಲ್ಲಿ ಬಿಜೆಪಿಯ ಕಟ್ಟಡ ನಿರ್ಮಾಣಕ್ಕೆ ಮುಂದುವರಿದ ಒತ್ತಡ?

ಜಿ.ಮಹಾಂತೇಶ್ಜಿ.ಮಹಾಂತೇಶ್19 Oct 2022 8:39 AM IST
share
ಪರಿಶಿಷ್ಟರಿಗೆ ಕಾಯ್ದಿರಿಸಿದ ಜಮೀನಿನಲ್ಲಿ ಬಿಜೆಪಿಯ ಕಟ್ಟಡ ನಿರ್ಮಾಣಕ್ಕೆ ಮುಂದುವರಿದ ಒತ್ತಡ?

ಬೆಂಗಳೂರು: ಪರಿಶಿಷ್ಟ ಜಾತಿಯ ಸರಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕಾಯ್ದಿರಿಸಲಾಗಿರುವ ನಿವೇಶನವನ್ನು ರಾಜಕೀಯ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಂಜೂರು ಮಾಡಲು ಅವಕಾಶಗಳಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯು ಒಂದು ವರ್ಷದ ಹಿಂದೆಯೇ ಸಲ್ಲಿಸಿರುವ ವರದಿಯನ್ನು ಬದಿಗಿರಿಸಲು ಹೊರಟಿರುವ ರಾಜ್ಯ ಬಿಜೆಪಿ ಸರಕಾರವು ಬಿಜೆಪಿಯ ಕಟ್ಟಡ ನಿರ್ಮಾಣ ಮಾಡಲು ನಿವೇಶನಕ್ಕಾಗಿ ಜಿಲ್ಲಾಡಳಿತದ ಮೇಲೆ ಒತ್ತಡ ಮುಂದುವರಿಸಿದೆ.

ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪ್ರತಿನಿಧಿಸಿರುವ ಮುಧೋಳ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಶದಲ್ಲಿರುವ ನಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿ ಕಟ್ಟಡ ನಿರ್ಮಾಣ ಸಂಬಂಧ ನಿವೇಶನ ಮಂಜೂರು ಮಾಡಬೇಕು ಎಂಬ ಅರ್ಜಿ ಸಲ್ಲಿಕೆಯಾಗಿತ್ತು. ಈ ಪ್ರಸ್ತಾವ ಕುರಿತು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು 2021ರ ಡಿಸೆಂಬರ್ 28ರಂದೇ ವರದಿ ಸಲ್ಲಿಸಿದ್ದರು.

ಆಯುಕ್ತರ ಪತ್ರದಲ್ಲೇನಿದೆ?

ಮುಧೋಳ ನಗರದ ಮಂಟೂರು ರಸ್ತೆಯಲ್ಲಿ ಲಭ್ಯವಿರುವ ಸಮಾಜ ಕಲ್ಯಾಣ ಇಲಾಖೆಯ ಖಾಲಿ ನಿವೇಶನವನ್ನು (ಆರ್‌ಎಸ್ ನಂ 212 ಮತ್ತು ಸಿಟಿಎಸ್ 2588, 134.00 ಚ.ಮೀ.) ಮಂಜೂರು ಮಾಡಲು ಕೋರಲಾಗಿದೆ. ಈ ನಿವೇಶನವು ಇಲಾಖೆಯ ಹೆಸರಿನಲ್ಲಿದೆ. ಅಲ್ಲದೆ ಇದನ್ನು ಇಲಾಖೆಯ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣಕ್ಕೆ ಕಾಯ್ದಿರಿಸಲಾಗಿದೆ. ಇಲಾಖೆಯು ನಡೆಸುತ್ತಿರುವ ಪರಿಶಿಷ್ಟ ಜಾತಿಯ ಸರಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣ ಸಂಬಂಧವಾಗಿ ಕಾಯ್ದಿರಿಸಿರುವ ನಿವೇಶನ ವನ್ನು ರಾಜಕೀಯ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರು ಮಾಡಲು ಅವಕಾಶಗಳಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದರು.

ಇದಷ್ಟೇ ಅಲ್ಲ 2022ರ ಮಾರ್ಚ್ 24ರಂದು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೂ ದಾಖಲೆ ಸಮೇತ ಪತ್ರ ಬರೆದಿದ್ದರು. ಸರಕಾರಿ ಭೂಮಿಯನ್ನು ಯಾವುದೇ ರಾಜಕೀಯ ಪಕ್ಷದ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರು ಮಾಡಿರುವ ನಿದರ್ಶನಗಳಿಲ್ಲ. ಸರಕಾರಿ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ಮಂಜೂರು ಮಾಡುವ ಕುರಿತು ಯಾವುದೇ ಮಾರ್ಗಸೂಚಿಗಳು ಲಭ್ಯವಿರುವುದಿಲ್ಲ ಎಂದು ಸ್ಪಷ್ಟವಾಗಿ ಇಲಾಖೆಯ ಕಾರ್ಯದರ್ಶಿಗೆ ಆಯುಕ್ತರು ಪತ್ರದಲ್ಲಿ ವಿವರಿಸಿದ್ದರು.

ಆದರೂ ಮತ್ತೊಂದು ವರದಿ ಸಲ್ಲಿಸಬೇಕು ಎಂದು ಕಂದಾಯ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಯು 2022ರ ಜೂನ್ 9ರಂದು ಬಾಗಲಕೋಟೆ ಜಿಲ್ಲಾಧಿಕಾರಿಗೆ ಪತ್ರ ಬರೆದು ವರದಿ ಸಲ್ಲಿಸಲು ಸೂಚಿಸುವ ಮೂಲಕ ಜಿಲ್ಲಾಡಳಿತದ ಮೇಲೆ ಒತ್ತಡ ಹೇರುತ್ತಿದೆ ಎಂದು ತಿಳಿದು ಬಂದಿದೆ.

2019-20ನೇ ಸಾಲಿನಲ್ಲಿ ಬಿಜೆಪಿ ರಾಷ್ಟ್ರೀಯ ಘಟಕವು 4,848 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದನ್ನು ಪ್ರಕಟಿಸಿತ್ತು. ಅದೇ ರೀತಿ 2020-21ರಲ್ಲಿ ಬಿಜೆಪಿಯ ಕರ್ನಾಟಕ ಘಟಕವು 22.44 ಕೋಟಿ ರೂ.ನಷ್ಟು ದೇಣಿಗೆ ಸಂಗ್ರಹಿಸಿತ್ತು ಎಂದು ಎಡಿಆರ್ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

ಸಾವಿರಾರು ಕೋಟಿ ರೂ. ದೇಣಿಗೆ ಪಡೆಯುತ್ತಿರುವ ಭಾರತೀಯ ಜನತಾ ಪಾರ್ಟಿಯು ತಾಲೂಕು ಪ್ರದೇಶಗಳಲ್ಲಿ ಸ್ವಂತ ಕಚೇರಿಗಾಗಿ ಕಟ್ಟಡ ನಿರ್ಮಾಣ ಮಾಡಲು ಪರಿಶಿಷ್ಟ ಜಾತಿಯ ಸರಕಾರಿ ವಿದ್ಯಾರ್ಥಿ ನಿಲಯಗಳೂ ಸೇರಿದಂತೆ ಸಾರ್ವಜನಿಕ ಉದ್ದೇಶಕ್ಕೆ ಕಾಯ್ದಿರಿಸಿರುವ ನಿವೇಶನ, ಜಮೀನುಗಳನ್ನು ಮಂಜೂರು ಮಾಡಿಸಿಕೊಳ್ಳಲು ಭಗೀರಥ ಪ್ರಯತ್ನ ಮುಂದುವರಿಸಿದೆ.

ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ್ದ ನಿವೇಶನಗಳನ್ನು ಪಕ್ಷದ ಸ್ವಂತ ಕಚೇರಿಗಾಗಿ ಮಂಜೂರು ಮಾಡಿಸಿಕೊಳ್ಳಲು ಕಂದಾಯ ಇಲಾಖೆಗೆ ವಿವಿಧ ಜಿಲ್ಲೆಗಳಿಂದ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಕಾನೂನು ಇಲಾಖೆಯ ಅಸಮ್ಮತಿ ನಡುವೆಯೂ ರಾಷ್ಟ್ರೋತ್ಥಾನ ಪರಿಷತ್‌ಗೆ ಗೋಮಾಳ ಮಂಜೂರು ಮಾಡಿರುವ ಬೆನ್ನಲ್ಲೇ ಹಲವು ಸಚಿವರು ತಾಲೂಕು ಪ್ರದೇಶಗಳಲ್ಲಿ ಪಕ್ಷಕ್ಕೆ ಸ್ವಂತ ಕಚೇರಿಗಾಗಿ ನಾಗರಿಕ ನಿವೇಶನ, ಇತರ ಇಲಾಖೆಗಳು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿರುವ, ಮೀಸಲಿರಿಸಿರುವ ನಿವೇಶನಗಳನ್ನು ಮಂಜೂರು ಮಾಡಲು ಸಲ್ಲಿಸಿರುವ ಅರ್ಜಿಗಳತ್ತ ಅತ್ಯುತ್ಸಾಹ ವಹಿಸಿರುವ ಕಂದಾಯ ಸಚಿವ ಆರ್. ಅಶೋಕ್ ಅವರು ಪೂರಕವಾಗಿ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X