Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಕೇಂದ್ರೀಕರಣದ ಮೇಲೆ ಅಡ್ಡ ಪರಿಣಾಮ:...

ವಿಕೇಂದ್ರೀಕರಣದ ಮೇಲೆ ಅಡ್ಡ ಪರಿಣಾಮ: ಆತಂಕ

ಕಂದಾಯ ಆಯುಕ್ತಾಲಯ ಸ್ಥಾಪನೆಗೆ ಪ್ರಾದೇಶಿಕ ಆಯುಕ್ತರ ವಿರೋಧ

ಜಿ.ಮಹಾಂತೇಶ್ಜಿ.ಮಹಾಂತೇಶ್19 Oct 2022 9:42 AM IST
share

ಬೆಂಗಳೂರು: ಕಂದಾಯ ಆಯುಕ್ತಾಲಯ ಸ್ಥಾಪನೆಗೆ ರಾಜ್ಯ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರ ನೇತೃತ್ವದ ಆಡಳಿತ ಸುಧಾರಣೆ ಆಯೋಗವು ಮಾಡಿದ್ದ ಶಿಫಾರಸಿಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕಂದಾಯ ಆಯುಕ್ತಾಲಯ ಸ್ಥಾಪಿಸಿದಲ್ಲಿ ವಿಕೇಂದ್ರೀಕರಣದ ಮೇಲೆ ಅಡ್ಡ ಪರಿಣಾಮ ಬೀರಲಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನೇ  ಮುಂದುವರಿಸಬೇಕು ಎಂದು ನೀಡಿರುವ ಸಮರ್ಥನೆಯು ಆಡಳಿತ ಸುಧಾರಣೆ ಅಯೋಗದ ಶಿಫಾರಸಿನ ಅನುಷ್ಠಾನಕ್ಕೆ ಹಿನ್ನಡೆಯಾದಂತಿದೆ.

ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ 2022ರ ಅಕ್ಟೋಬರ್ 15ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯು ''the-file.in''ಗೆ ಲಭ್ಯವಾಗಿದೆ.

ಕಂದಾಯ ಆಯುಕ್ತಾಲಯ ಸ್ಥಾಪಿಸುವ ಬದಲಾಗಿ ವಿಭಾಗ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಮುಂದುವರಿಸಿ ಬಲಪಡಿಸಬೇಕು ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರದಲ್ಲಿ ಬಲವಾದ ಕಾರಣಗಳನ್ನು ಒದಗಿಸಿದ್ದಾರೆ.

 ಪ್ರಾದೇಶಿಕ ಆಯುಕ್ತರ ಪತ್ರದಲ್ಲೇನಿದೆ?: 1892ನೇ ಸಾಲಿನಲ್ಲಿ ಈಸ್ಟ್ ಇಂಡಿಯಾ ಕಂಪೆನಿಯು ಆಂಗ್ಲರ ಆಡಳಿತ ವ್ಯಾಪ್ತಿಯು ಹೆಚ್ಚಾದ ಕಾರಣ ಬಹಳ ಅಂತರವಿರುವ ಜಿಲ್ಲೆಗಳ ಸುಗಮ ಆಡಳಿತದ ಸಲುವಾಗಿ ಆಡಳಿತ ಮಟ್ಟದಲ್ಲಿ ವಿಭಾಗವನ್ನು ಸ್ಥಾಪಿಸಿದೆ. ವಿಕೇಂದ್ರಿಕರಣಕ್ಕಾಗಿ ರಚಿಸಲಾಗಿದ್ದ 1907ರ ರಾಯಲ್ ಕಮಿಷನ್ ಸಹ ವಿಭಾಗ ಮಟ್ಟದ ಆಡಳಿತವನ್ನು ಉಳಿಸಲು ಶಿಫಾರಸು ಮಾಡಿದೆ. ಭಾರತ ಸ್ವಾತಂತ್ರ್ಯಗೊಂಡ ನಂತರ ಗುಜರಾತ್, ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ಸಿಕ್ಕಿಂ, ಮಣಿಪುರ, ತ್ರಿಪುರ, ಮಿಜೋರಾಂ, ಜಮ್ಮು ಕಾಶ್ಮೀರ, ಲಡಾಕ್ ರಾಜ್ಯಗಳು ಸಾಂಪ್ರದಾಯಿಕವಾದ ಕಂದಾಯ ವ್ಯವಸ್ಥೆಯು ಮುಂದುವರೆದಿದೆ ಎಂದು ಐತಿಹಾಸಿಕ ಕಾರಣಗಳನ್ನು ಮುಂದಿರಿಸಿರುವುದು ಪತ್ರದಿಂದ ತಿಳಿದು ಬಂದಿದೆ. ಪ್ರಾದೇಶಿಕ ಆಯುಕ್ತರು ವಿವಿಧ ಇಲಾಖೆಗಳ ಅಧಿಕಾರಿಗಳ ಆದೇಶ, ನಿರ್ಣಯಗಳ ವಿರುದ್ಧ ಮೇಲ್ಮನವಿ ಪ್ರಾಧಿಕಾರ ಆಗಿದ್ದಾರೆ. ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ರಾಜ್ಯ ಸರಕಾರಿ ನೌಕರರಿಗೆ ಶಿಸ್ತು ಪ್ರಾಧಿಕಾರವಾಗಿದ್ದಾರೆ. ವಿಭಾಗ ಮಟ್ಟದ ಕಂದಾಯ ಆಡಳಿತದ ಮೇಲೆ ನಿಯಂತ್ರಣ ಹೊಂದಿರುವ ಪ್ರಾದೇಶಿಕ ಆಯುಕ್ತರು ವಿವಾದಾಸ್ಪದ ಪ್ರಕರಣಗಳಲ್ಲಿ ಕಂದಾಯ ನ್ಯಾಯಾಲಯದ ಕಲಾಪಗಳನ್ನೂ ನಡೆಸುವ ಪ್ರಾಧಿಕಾರವಾಗಿದ್ದಾರೆ ಎಂದು ಸಮರ್ಥನೆ ಒದಗಿಸಲಾಗಿದೆ.

 ಸರಕಾರದ ಹಲವು ಸಾರ್ವಜನಿಕ ಅಂಗಸಂಸ್ಥೆಗಳೊಂದಿಗೆ ಸರಿಯಾಗಿ ಮತ್ತು ಪರಿಣಾಮಕಾರಿಯಾಗಿ ಸಮನ್ವಯ ಅಧಿಕಾರಿ, ವಿಬಾಗದ ವಿವಿಧ ಕಚೇರಿಗಳ ಮೇಲ್ವಿಚಾರಣೆ, ಮಾರ್ಗದರ್ಶನ, ನಿಯಂತ್ರಣ, ವಿಭಾಗದ ಎಲ್ಲ ಇಲಾಖೆಗಳ ಸಮನ್ವಯ ಮತ್ತು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ, ನಿವಾರಣೆ, ನಗರ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಅಭಿವೃದ್ಧಿ ಪ್ರಾಧಿಕಾರ, ಇತರೆ ಇಲಾಖೆಗಳ ಆಯವ್ಯಯದ ಮೇಲೆ ಆರ್ಥಿಕ ನಿಯಂತ್ರಣ ಹೊಂದಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಜಿಲ್ಲೆ ಮತ್ತು ರಾಜ್ಯ ಸರಕಾರದೊಂದಿಗೆ ಸಂವಹನ ಸೇತುವಾಗಿ ಕಾರ್ಯನಿರ್ವಹಿಸಲಾಗುತ್ತಿದೆಯಲ್ಲದೆ ತಾಂತ್ರಿಕ ಇಲಾಖೆಗಳಿಗೆ ವಿಭಾಗೀಯ ಸಮನ್ವಯ ಪ್ರಾಧಿಕಾರವಾಗಿದ್ದಾರೆ. ವಿಭಾಗ ಮಟ್ಟದಲ್ಲಿ ಉಪ ತಹಶೀಲ್ದಾರ್ ಮತ್ತು ಕೆಳಮಟ್ಟದ ಕಂದಾಯ ಅಧಿಕಾರಿಗಳ ವರ್ಗಾವಣೆ, ಶಿಸ್ತುಪ್ರಾಧಿಕಾರವಾಗಿಯೂ ಕಾರ್ಯನಿರ್ವಹಿಸಲಾಗುತ್ತಿದೆ.

 ಕರ್ನಾಟಕ ನೀರಾವರಿ ಕಾಯ್ದೆ 1965, ಕರ್ನಾಟಕ ಬಾಡಿಗೆ ನಿಯಂತ್ರಣ ಕಾಯ್ದೆ (1999), ಕರ್ನಾಟಕ ಭೂ ಕಂದಾಯ ಕಾಯ್ದೆ (1964), ಕರ್ನಾಟಕ ಭೂ ಸುಧಾರಣೆ ಕಾಯ್ದೆ (1961), ಕರ್ನಾಟಕ ಭೂ ಮಂಜೂರಾತಿ ನಿಯಮಾವಳಿಗಳು (1969), ಕರ್ನಾಟಕ ಪೌರಸಭೆಗಳ ಕಾಯ್ದೆ (1964), ಕರ್ನಾಟಕ ಇನಾಂ ರದ್ದಿಯಾತಿ ಮತ್ತು ಹಲವು ಇನಾಂಗಳ ರದ್ದಿಯಾಯಿತಿ ಕಾಯ್ದೆ, ಕರ್ನಾಟಕ ಪ.ಜಾ, ಪ.ಪಂ. ಮತ್ತು ಒಬಿಸಿ ನೇಮಕಾತಿ ಮತ್ತು ಮೀಸಲಾತಿ ಕಾಯ್ದೆ (1994), ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ ವಸತಿ ಹಾಗೂ ಪುನರ್ ನಿರ್ಮಾಣ ಕಾಯ್ದೆ 2013 ಸೇರಿದಂತೆ ಇನ್ನಿತರ ಕಾನೂನು ಮತ್ತು ನಿಯಮಗಳಡಿಯಲ್ಲಿ ಪ್ರಾದೇಶಿಕ ಆಯುಕ್ತರು ಮೇಲ್ಮನವಿ ಮತ್ತು ಪುನರ್ ಪರಿಶೀಲನೆ ಪ್ರಾಧಿಕಾರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸೂಕ್ತ ಕಾರಣಗಳನ್ನು ಪತ್ರದಲ್ಲಿ ಒದಗಿಸಿದ್ದಾರೆ.

ಆಯೋಗದ ಶಿಫಾರಸು ಅಂಗೀ ಕರಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಮತ್ತು ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿಯಾನೆಗಳಾಗಿವೆ’ ಎಂಬ ಕಂದಾಯ ಸಚಿವ ಆರ್.ಅಶೋಕ ಹೇಳಿಕೆ ನೀಡಿದ್ದರು.ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿತ್ತು.

‘ಈ ಹಿಂದೆ ಅಸ್ತಿತ್ವದಲ್ಲಿದ್ದ ವಿಭಾಗಾಧಿಕಾರಿಗಳ ಕಚೇರಿಗಳನ್ನು ರದ್ದುಗೊಳಿಸಲಾಗಿತ್ತು. ನಂತರ ಉದ್ಭವಿಸಿದ ಸಮಸ್ಯೆಗಳ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು. ಈಗ ಮತ್ತೆ ರದ್ದುಗೊಳಿಸುವುದು ಜನವಿರೋಧಿ ಕ್ರಮವಾಗಿದೆ’ ಎಂದು ಹೋರಾಟಗಾರರು ಆಕ್ಷೇಪಿಸಿದ್ದರು.

ಕಚೇರಿಗಳು ರದ್ದಾಗುವುದರಿಂದ ಸಾಮಾನ್ಯ ಜನರು ಬೆಂಗಳೂರಿಗೆ ದೌಡಾಯಿಸುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಜನವಿರೋಧಿ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಳ್ಳಬಾರದು’ ಎಂದು ಆಗ್ರಹಿಸಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X