ಸುರತ್ಕಲ್ ಟೋಲ್ ಗೇಟ್ ವಿರುದ್ಧ ಅ.28ರಿಂದ ಅಹೋರಾತ್ರಿ ಪ್ರತಿಭಟನೆ
ಹೋರಾಟ ಸಮಿತಿ ಸಭೆಯಲ್ಲಿ ತೀರ್ಮಾನ

ಸುರತ್ಕಲ್ ಟೋಲ್ ಗೇಟ್ ಎದುರು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಸುರತ್ಕಲ್, ಅ.19: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಹೋರಾಟ ತೀವ್ರಗೊಳಿಸಲು ಅಣಿಯಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅ.28ರಿಂದ ಟೋಲ್ ಗೇಟ್ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಇಂದು ಸುರತ್ಕಲ್ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಸಭೆಯಲ್ಲಿ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ, ಬಿ.ಕೆ.ಇಮ್ತಿಯಾಝ್, ಪುರುಷೋತ್ತಮ ಚಿತ್ರಾಪುರ, ಟಿ.ಎನ್.ರಮೇಶ್, ದೇವದಾಸ್, ರಘು ಎಕ್ಕಾರು, ರಾಜೇಶ್ ಕುಳಾಯಿ, ಶ್ರೀನಾಥ್ ಕಾಟಿಪಳ್ಳ, ಕಿಶೋರ್ ಶೆಟ್ಟಿ ಮುಲ್ಕಿ, ರಾಜೇಶ ಶೆಟ್ಟಿ ಪಡ್ರೆ ಸೇರಿದಂತೆ ಹೋರಾಟ ಸಮಿತಿಯ ಪ್ರಮುಖರು ಭಾಗವಹಿಸಿದ್ದರು.
ಈ ನಡುವೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಎಂದಿನಂತೆ ಟೋಲ್ ಸಂಗ್ರಹ ಮುಂದುವರಿದಿದೆ. ಸ್ಥಳದಲ್ಲಿ ಎರಡು ಕೆ.ಎಸ್.ಆರ್.ಪಿ. ತುಕಡಿಗಳು ಮತ್ತು ಸುರತ್ಕಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಸುಮಾರು 100 ಪೊಲೀಸರನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
