ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಬಿಎಸ್ ವೈ ನೇತೃತ್ವದ ನಿಯೋಗದಿಂದ ಕೇಂದ್ರ ಅರಣ್ಯ ಸಚಿವರ ಬೇಟಿ

ಹೊಸದಿಲ್ಲಿ: ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವರನ್ನು ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಬೇಟಿಯಾಗಿ ಶರಾವತಿ ಕಣಿವೆ ಜಲವಿದ್ಯುತ್ ಯೋಜನೆಯ ಸಂತ್ರಸ್ತ ಕುಟುಂಬಗಳ ಪುನರ್ವಸತಿ ಉದ್ದೇಶಕ್ಕಾಗಿ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಸಂಬಂಧ ರಾಜ್ಯದಿಂದ ಕಳುಹಿಸುವ ಪ್ರಸ್ತಾವನೆಗೆ ಅನುಮತಿ ನೀಡುವಂತೆ ಹಾಗೂ ಕಸ್ತೂರಿ ರಂಗನ್ ವರದಿಯಿಂದ ಮಲೆನಾಡಿಗರಿಗೆ ಆಗುವ ತೊಂದರೆಗಳ ಬಗ್ಗೆ ಚರ್ಚಿಸಲಾಯಿತು.
ನಿಯೋಗದ ಮನವಿಗೆ ಸ್ಪಂದಿಸಿದ ಸಚಿವ ಭೂಪೇಂದ್ರ ಯಾದವ್, ಸಂತ್ರಸ್ತರ ಹಾಗೂ ಮಲೆನಾಡಿಗರ ಹಿತ ಕಾಯಲು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ತಿಳಿಸಿದರು.
ನಿಯೋಗದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ,, ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.
Next Story





