Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ​ಕಾಂಗ್ರೆಸ್ ಪಕ್ಷದ ಸುಳ್ಳು ಪ್ರಚಾರಕ್ಕೆ...

​ಕಾಂಗ್ರೆಸ್ ಪಕ್ಷದ ಸುಳ್ಳು ಪ್ರಚಾರಕ್ಕೆ ಸ್ಪಷ್ಟ ಉತ್ತರ ಕೊಡಿ: ಸಚಿವ ಸುನೀಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ20 Oct 2022 1:01 PM IST
share
​ಕಾಂಗ್ರೆಸ್ ಪಕ್ಷದ ಸುಳ್ಳು ಪ್ರಚಾರಕ್ಕೆ ಸ್ಪಷ್ಟ ಉತ್ತರ ಕೊಡಿ: ಸಚಿವ ಸುನೀಲ್ ಕುಮಾರ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸುಳ್ಳು ಪ್ರಚಾರಕ್ಕೆ ನಮ್ಮ ಕಾರ್ಯಕರ್ತರು ಸ್ಪಷ್ಟ ಉತ್ತರ ಕೊಡಬೇಕು; ನಮ್ಮ ಸರಕಾರಗಳ ಜನಪರ ಕೆಲಸಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರು ಸಲಹೆ ನೀಡಿದರು.

ನಗರದ ವಯ್ಯಾಲಿಕಾವಲ್‍ನ “ಶ್ರೀ ಕೃಷ್ಣದೇವರಾಯ ಕಲಾಮಂದಿರ”ದಲ್ಲಿ ಇಂದು ನಡೆದ ಬಿಜೆಪಿ ಎಂಟು ಮೋರ್ಚಾಗಳ ‘ಮಾಧ್ಯಮ ಮಂಥನ’ ಮೋರ್ಚಾಗಳ ಮಾಧ್ಯಮ ಸಂಚಾಲಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದವರು ಹತ್ತು ಬಾರಿ ಸುಳ್ಳನ್ನು ಹೇಳಿ ಅದನ್ನು ಸತ್ಯವೆಂದು ಬಿಂಬಿಸಲು ಮುಂದಾಗಿದ್ದಾರೆ. ಆದರೆ, ಅದನ್ನು ಜನರು ನಂಬುತ್ತಿಲ್ಲ. ಆದರೂ, ಅದನ್ನು ತಪ್ಪಿಸಲು ನಾವು ಹೆಚ್ಚು ಜಾಗೃತರಾಗಬೇಕು; ಇದಕ್ಕಾಗಿ ನಮ್ಮ ವಿಷಯಗಳನ್ನು ಸಮರ್ಥವಾಗಿ ಹಾಗೂ ಸಕಾಲಿಕವಾಗಿ ಜನರಿಗೆ ತಲುಪಿಸಬೇಕು ಎಂದು ಕಿವಿಮಾತು ಹೇಳಿದರು.

ಅಪಪ್ರಚಾರಗಳೇ ಸದ್ದು ಮಾಡುತ್ತಿವೆ. ಒಳ್ಳೆಯ ವಿಚಾರಗಳಿಗೆ ಸಾಕಷ್ಟು ಪ್ರಚಾರ ಸಿಗುತ್ತಿಲ್ಲ. ನಮ್ಮ ಸರಕಾರದ ಉತ್ತಮ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ಮತಾಂತರ ನಿಷೇಧ, ಗೋಹತ್ಯಾ ನಿಷೇಧ ಮತ್ತು ಗೋಶಾಲೆಗಳ ನಿರ್ಮಾಣ, ಗ್ರಾಮ ಒನ್ ಯೋಜನೆ, ಯಶಸ್ವಿನಿ ಯೋಜನೆ ಮರುಜಾರಿಯಂಥ ವಿಚಾರಗಳನ್ನು ನಮ್ಮ ತಂಡವು ಜನರಿಗೆ ತಿಳಿಸಬೇಕು. ಅವುಗಳನ್ನು ತಿಳಿಸಿ ಜನಜಾಗೃತಿ ಮೂಡಿಸಿ ಎಂದು ಮನವಿ ಮಾಡಿ, ಯಶಸ್ವಿನಿ ಯೋಜನೆಯನ್ನು ಹಿಂದಿನ ಸರಕಾರ ಕೈಬಿಟ್ಟಿತ್ತು ಎಂದು ವಿವರಿಸಿದರು.

ಹಿಂದಿನ ಕಾಲದಲ್ಲಿ ನಾಲ್ಕು ಗೋಡೆಗಳು, ನಾಲ್ಕು ಮನೆಗಳ ಮಧ್ಯದಲ್ಲಿ ವಿಚಾರಧಾರೆಯನ್ನು ಹಂಚಿಕೊಂಡು ಸಂಘಟನೆಗಳು ಬೆಳೆದುಬಂದಿದ್ದವು. ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ ಮಾಧ್ಯಮಗಳ ವ್ಯಾಪ್ತಿ ವಿಸ್ತಾರಗೊಂಡಿದೆ. ಅಲ್ಲದೆ, ಇಂದು ಮಾಧ್ಯಮಗಳ ಮೂಲಕ ಹೆಚ್ಚು ಸಂಗತಿ ತಿಳಿಸಬೇಕಾದ ವೇಗದ ಕಾಲಘಟ್ಟದಲ್ಲಿ ನಾವಿದ್ದೇವೆ ಎಂದು ತಿಳಿಸಿದರು.

ಸರಕಾರದ ಕಾರ್ಯಕ್ರಮಗಳು ಮತ್ತು ಪಕ್ಷದ ವಿಚಾರಧಾರೆಯನ್ನು ಜನರಿಗೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ರಾಜ್ಯ ಸರಕಾರ ಜಾರಿಗೊಳಿಸಿದ 72 ಗಂಟೆಯೊಳಗೆ ಪಿಂಚಣಿ ಕೊಡುವ ಕಂದಾಯ ಇಲಾಖೆಯ ದೊಡ್ಡ ಕಾರ್ಯಕ್ರಮ, ಇಂಧನ ಇಲಾಖೆಯಿಂದ ಜಾರಿಗೊಳಿಸಲಾದ ಬೆಳಕು ಯೋಜನೆ, ಅಮೃತ ಜ್ಯೋತಿ ಯೋಜನೆಯಡಿ ಉಚಿತವಾಗಿ ವಿದ್ಯುತ್ ಕೊಡುವ ಕಾರ್ಯಕ್ರಮ, ಸ್ತ್ರೀಶಕ್ತಿ ಗುಂಪುಗಳಿಗೆ 1 ಲಕ್ಷ ಅನುದಾನ ಸೇರಿದಂತೆ ವಿವಿಧ ಜನೋಪಯೋಗಿ ಕಾರ್ಯಗಳು, ಕೇಂದ್ರದ ಬಿಜೆಪಿ ಸರಕಾರವು ಕೋವಿಡ್ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳಿಂದ ಕೊಡುತ್ತಿರುವ ಉಚಿತ ಪಡಿತರದಂಥ ಯೋಜನೆಯ ಬಗ್ಗೆ ಜನಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು.

20 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಯೋಜನೆಯ ಲಾಭ ಸಿಗುತ್ತಿದೆ ಎಂದರು. ಮೀಸಲಾತಿ ಹೆಚ್ಚಳ ವಿಚಾರವನ್ನು ಮೋರ್ಚಾಗಳು ಜನಮಾನಸಕ್ಕೆ ತಿಳಿಸಬೇಕಿದೆ ಎಂದು ತಿಳಿಸಿದರು.

2 ಸಾವಿರ ಕೋಟಿ ರೂಪಾಯಿ ಮೌಲ್ಯದ ವಕ್ಫ್ ಬೋರ್ಡ್ ಆಸ್ತಿಯನ್ನು ಕಾಂಗ್ರೆಸ್ ನಾಯಕರು ನುಂಗಿದ ಹಗರಣ ನಡೆದಿದೆ. ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕರ್ತರು ಇದನ್ನು ತಿಳಿಹೇಳಬೇಕು ಎಂದು ತಿಳಿಸಿದರು. ಕೇವಲ ಪತ್ರಿಕಾಗೋಷ್ಠಿ ಮಾಡಿದರೆ ಸಾಲದು. ಸಣ್ಣ ವಿಡಿಯೋ, ಕರಪತ್ರದಂಥ ಅವಕಾಶಗಳನ್ನೂ ಬಳಸಿಕೊಳ್ಳಿ ಎಂದು ತಿಳಿಸಿದರು. ಬೆಳಿಗ್ಗೆ ಪತ್ರಿಕೆಯನ್ನು ನೋಡಿ ಬಳಿಕ ಪ್ರತಿಕ್ರಿಯೆ ಕೊಡಿ ಎಂದರು.

ಈ ಸಮಾರಂಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ, ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ. ಸಂದೀಪ್ ಕುಮಾರ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಅವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X