ನ.1ರಂದು ನಟ ಪುನೀತ್ ರಾಜ್ಕುಮಾರ್ಗೆ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

"ಈಗಾಗಲೇ ತೀರ್ಮಾನಿಸಿದಂತೆ, ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇದೇ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಎದುರೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು." ಮುಖ್ಯಮಂತ್ರಿ : @BSBommai#PuneethRajkumar pic.twitter.com/unMe9hxeNC
— CM of Karnataka (@CMofKarnataka) October 20, 2022ಬೆಂಗಳೂರು, ಅ. 20:‘ಚಿತ್ರನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ‘ಕರ್ನಾಟಕ ರತ್ನ ಪ್ರಶಸ್ತಿ' ನೀಡುವುದಾಗಿ ಘೋಷಿಸಿದ್ದು, ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈವರೆಗೆ 8 ಜನರಿಗೆ ‘ಕರ್ನಾಟಕ ರತ್ನ ಪ್ರಶಸ್ತಿ' ನೀಡಲಾಗಿದ್ದು, 2009ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಪುನೀತ್ ರಾಜ್ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು' ಎಂದು ತಿಳಿಸಿದರು.
ಪುನೀತ್ ನಿಜವಾದ ಕರ್ನಾಟಕ ರತ್ನ: ‘ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಭಾಷೆ ಸಂಸ್ಕೃತಿಗೆ ಪುನೀತ್ ರಾಜ್ಕುಮಾರ್ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ತಮ್ಮ ಜೀವಮಾನದಲ್ಲಿ ಸಾಧನೆ ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾದ ಕರ್ನಾಟಕ ರತ್ನ. ಅವರು ಸದಾಕಾಲ ಯುವಜನರಿಗೆ ಪ್ರೇರಣೆಯಾಗಿರಬೇಕು ಎಂಬ ಮಹಾದಾಸೆಯಿಂದ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ' ಎಂದರು.
‘ನವೆಂಬರ್ 1ರ ಸಂಜೆ 5 ಗಂಟೆಗೆ ವಿಧಾನಸೌಧ ವೈಭವ ಪೇತ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗುವುದು ವಿಶೇಷ ಮುಖ್ಯ ಅತಿಥಿಗಳು, ಶ್ರೇಷ್ಠ ಸಾಹಿತಿಗಳು, ಚಲನಚಿತ್ರ ನಟರು, ಸಚಿವರು, ಶಾಸಕರು, ಸಾಧಕರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಅರ್ಥಪೂರ್ಣ ಕಾರ್ಯಕ್ರಮವಾಗಿರಲಿದೆ' ಎಂದು ಅವರು ತಿಳಿಸಿದರು.
‘ಪುನೀತ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂಬ ಅಭಿಮಾನಿಗಳ ಬೇಡಿಕೆ ಇದೆ. ನ.1ರ ನಂತರ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಒಟ್ಟು 3 ಕಾರ್ಯಕ್ರಮಗಳನ್ನು ಸುಮಾರು10 ದಿನಗಳ ಕಾಲ ಆಯೋಜಿಸಲಾಗುವುದು' ಎಂದು ಅವರು ಉತ್ತರಿಸಿದರು.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ
"ಈಗಾಗಲೇ ತೀರ್ಮಾನಿಸಿದಂತೆ, ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಇದೇ ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಸಂಜೆ 4 ಗಂಟೆಗೆ ವಿಧಾನ ಸೌಧದ ಎದುರೆ ನಡೆಯುವ ಸಮಾರಂಭದಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು." ಮುಖ್ಯಮಂತ್ರಿ : @BSBommai#PuneethRajkumar pic.twitter.com/unMe9hxeNC
— CM of Karnataka (@CMofKarnataka) October 20, 2022







