Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟ್ಟಡ ಕಾರ್ಮಿಕರ ನಿಧಿ ದೋಚಲು ಸಚಿವರು,...

ಕಟ್ಟಡ ಕಾರ್ಮಿಕರ ನಿಧಿ ದೋಚಲು ಸಚಿವರು, ಶಾಸಕರ ಹೊಂಚು: ಬಾಲಕೃಷ್ಣ ಶೆಟ್ಟಿ ಆರೋಪ

ವಾರ್ತಾಭಾರತಿವಾರ್ತಾಭಾರತಿ20 Oct 2022 4:54 PM IST
share
ಕಟ್ಟಡ ಕಾರ್ಮಿಕರ ನಿಧಿ ದೋಚಲು ಸಚಿವರು, ಶಾಸಕರ ಹೊಂಚು: ಬಾಲಕೃಷ್ಣ ಶೆಟ್ಟಿ ಆರೋಪ

ಉಡುಪಿ, ಅ.20: ರಾಜ್ಯದ ಬೊಕ್ಕಸವನ್ನು ಶೇ.40ರಷ್ಟು ಭ್ರಷ್ಟಾಚಾರದ ಮೂಲಕ ನುಂಗಿ ನೀರು ಕುಡಿದಿರುವ ರಾಜ್ಯದ ಬಿಜೆಪಿ ಸರಕಾರದ ಸಚಿವರು, ಶಾಸಕರು ಇದೀಗ ಬಡ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿರುವ ನಿಧಿಯಲ್ಲಿ 450 ಕೋಟಿ ರೂ. ಹಣವನ್ನು ಸ್ಲಂ ಬೋರ್ಡ್ ವಸತಿ ನಿರ್ಮಾಣ ಏಜೆನ್ಸಿಗಳಿಗೆ ನೀಡಿದ್ದಾರೆ ಎಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್(ಸಿಐಟಿಯು) ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಆರೋಪಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಹಲವು ವರ್ಷಗಳಿಂದ ಮಂಡಳಿಯಿಂದ ಮನೆ ನಿರ್ಮಾಣಕ್ಕೆ ಸಹಾಯಧನಕ್ಕಾಗಿ ಕಾಯುತಿದ್ದಾರೆ. ಆದರೆ ಅವರಿಗೆ ಯಾವುದೇ ಆರ್ಥಿಕ ನೆರವು ನೀಡದ ಮಂಡಳಿ ಅಧ್ಯಕ್ಷ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಸತಿ ಸೇರಿದಂತೆ ಇತರ ಸಚಿವರ ಒತ್ತಡಕ್ಕೆ ಮಣಿದು ಕೊಳಚೆ ನಿರ್ಮೂಲನ ಮಂಡಳಿ ಮೂಲಕ ನಿರ್ಮಿಸುವ 21000 ಮನೆಗಳಿಗೆ 433 ಕೋಟಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನಿರ್ಮಿಸುವ 423 ಮನೆಗಳಿಗೆ 8.33 ಕೋಟಿ ರೂ. ಏಜೆನ್ಸಿದಾರರಿಗೆ ವರ್ಗಾಯಿಸಿದೆ ಎಂದರು.

ಈ ಮೂಲಕ ಸರಕಾರ ಲಕ್ಷಾಂತರ ಬಡ ಕಟ್ಟಡ ಕಾರ್ಮಿಕರಿಗೆ ದ್ರೋಹ ಬಗೆದಿದ್ದು, ಇದರಲ್ಲಿ ರಾಜ್ಯದ ಸಚಿವರು ಹಾಗೂ ಶಾಸಕರು ಅಪಾರ ಪ್ರಮಾಣದ ಹಣವನ್ನು ಕಮಿಷನ್ ರೂಪದಲ್ಲಿ ದೋಚಲು ಹೊಂಚು ಹಾಕಿರುವುದು ಕಂಡು ಬರುತ್ತದೆ ಎಂದು ಅವರು ದೂರಿದರು.

ನಕಲಿ ಕಟ್ಟಡ ಕಾರ್ಮಿಕರು

ವಸತಿ ಸಚಿವರು ಸರಕಾರಗಳ ಅನುದಾನ ಬಳಸಿ, ಮನೆ ನಿರ್ಮಿಸುವ ಬದಲು ಸಾವಿರಾರು ನಕಲಿ ಕಟ್ಟಡ ಕಾರ್ಮಿಕರನ್ನು ಮಂಡಳಿಯಲ್ಲಿ ನೋಂದಾಯಿಸಿ, ನೂರಾರು ಕೋಟಿ ರೂಪಾಯಿ ಹಣ ದೋಚಿದ್ದಾರೆ. ಸಚಿವ ಶಿವರಾಮ ಹೆಬ್ಬಾರ್ ಕೋವಿಡ್ ಸಮಯದಲ್ಲಿ ಸಾವಿರಾರು ಕೋಟಿ ಖರೀದಿಗಳ ಮೂಲಕ ನೂರಾರು ಕೋಟಿ ಹಣದ ಅವ್ಯವಹಾರ ನಡೆಸಿದ್ದಾರೆ ಎಂದು ಬಾಲಕೃಷ್ಣ ಶೆಟ್ಟಿ ಆರೋಪಿಸಿದರು.

ಕಲ್ಯಾಣ ಮಂಡಳಿಯ ಕೆಲವು ಕಾರ್ಮಿಕ ಅಧಿಕಾರಿಗಳು ಏಜೆಂಟರು, ಭ್ರಷ್ಟರುಗಳಿಗೆ ಮಣೆ ಹಾಕಿದ ಪರಿಣಾಮ ನೈಜ ಕಾರ್ಮಿಕರಿಗೆ ಮಂಡಳಿ ಸೌಲಭ್ಯಗಳು ದೊರಕದೆ ನಕಲಿ ಜನರು ಕಬಳಿಸುವಂತಾಗಿದೆ. ಈಗಾಗಲೇ ರಾಜ್ಯ ಮಂಡಳಿಯಲ್ಲಿ ನೊಂದಾಯಿತ 37ಲಕ್ಷ ಕಟ್ಟಡ ಕಾರ್ಮಿಕರ ಪೈಕಿ 17ಲಕ್ಷ ಮಂದಿ ಮಾತ್ರ ನಿಜವಾದ ಕಾರ್ಮಿಕರು. ಉಳಿದವರು ನಕಲಿ ಕಾರ್ಮಿಕರು ಎಂದು ಅವರು ದೂರಿದರು.

ಸ್ಲಂ ಬೋರ್ಡ್‌ಗೆ ವರ್ಗಾವಣೆ ಮಾಡಿರುವ ಹಣವನ್ನು ಮಂಡಳಿಗೆ ವಾಪಾಸ್ ಪಡೆಯಬೇಕು ಹಾಗೂ ನೋಂದಾಯಿತ ನೈಜ ಕಟ್ಟಡ ಕಾರ್ಮಿಕರಿಗೆ ಮಾತ್ರವೇ ಮನೆ ನಿರ್ಮಾಣಕ್ಕೆ ಸಹಾಯಧನ ನೀಡಬೇಕು. ಮಂಡಳಿಯ ಎಲ್ಲ ಖರೀದಿಗಳನ್ನು ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿ ಇಂದು ಉಡುಪಿ ಯಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯ ಸಂಚಾಲಕರಾದ ಸುರೇಶ ಕಲ್ಲಾಗರ ಹಾಗೂ ರೊನಾಲ್ಡ್ ಕ್ವಾಡ್ರಸ್ ಉಪಸ್ಥಿತರಿದ್ದರು.

ಮರಳು ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆಗ್ರಹ

ಉಡುಪಿ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರವು ಮರಳು ಲಭ್ಯತೆಯ ಮೇಲೆ ಅವಲಂಬಿತವಾಗಿದೆ. ಚೆನ್ನೈ ಹಸಿರು ಪೀಠದ ತೀರ್ಪಿನಿಂದಾಗಿ ಸಿಆರ್‌ಝಡ್ ವಲಯದಲ್ಲಿ ಮರಳುಗಾರಿಕೆ ನಡೆಯುತ್ತಿಲ್ಲ. ಇದರಿಂದ ಮರಳು ಲಭ್ಯತೆ ತೀವ್ರ ವಾಗಿ ಕುಸಿದಿದ್ದು, ದರದಲ್ಲಿ ತೀವ್ರ ಹೆಚ್ಚಳವಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮವರ್ಗದ ಜನರು ಮನೆ ನಿರ್ಮಿಸದಿರುವುದರಿಂದ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ ಎಂದು ಬಾಲಕೃಷ್ಣ ಶೆಟ್ಟಿ ಹೇಳಿದರು.

ಈ ಕುರಿತು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ. ಮರಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಗಮನ ನೀಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X