Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಟಿಡಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ...

ಜಿಟಿಡಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ

ಕೊನೆಗೂ ರಾಜಕೀಯ ನಿರ್ಧಾರ ಪ್ರಕಟಿಸಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ

ವಾರ್ತಾಭಾರತಿವಾರ್ತಾಭಾರತಿ20 Oct 2022 6:00 PM IST
share
ಜಿಟಿಡಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ

ಮೈಸೂರು,ಅ.20: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ದಿಢೀರ್ ಭೇಟಿ ನೀಡಿದರು.

ಮೈಸೂರಿನಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಾಗಾರದಲ್ಲಿ ಪಾಲ್ಗೊಂಡ ಬಳಿಕ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡ ಅವರ ಮನೆಗೆ ಆಗಮಿಸಿದರು.

ಮನೆಗೆ ಆಗಮಿಸಿದ  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಶಾಸಕ ಜಿ.ಟಿ.ದೇವೇಗೌಡ ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಈ ಸಂದರ್ಭದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ಶಾಸಕ ಜಿ.ಟಿ.ದೇವೇಗೌಡ ಕಣ್ಣೀರಿಟ್ಟ ಪ್ರಸಂಗವೂ ನಡೆಯಿತು.

ಜಿ.ಟಿ.ದೇವೇಗೌಡರನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾಧ್ಯಮಗಳ ಜತೆ ಮಾತನಾಡಿದ ದೇವೇಗೌಡ, ''ಜಿ.ಟಿ.ದೇವೇಗೌಡರನ್ನು ಮರಿ ದೇವೇಗೌಡ ಎಂದು ಕರೆಯುತ್ತೇನೆ. ನಾನು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಾ.ರಾ.ಮಹೇಶ್ ಬರುವ ಮೊದಲು ಜಿ.ಟಿ‌.ದೇವೇಗೌಡರು ನಮ್ಮ ಜತೆಯಲ್ಲಿ ಇದ್ದರು. ಜಿ.ಟಿ.ದೇವೇಗೌಡ  ಬೆಳೆಯಲು ಬಿಡಬಾರದು ಎಂದು ಎಂಪಿ ಚುನಾವಣೆಯಲ್ಲಿ ಸೋಲಿಸಿದರು. ಹಾಗೆ ಸೋಲಿಗೆ ಕಾರಣರಾದವರು ಈಗ ನಮ್ಮ ಜತೆಯಲ್ಲಿ ಇಲ್ಲ'' ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದರು.

''ಪಾರ್ಲಿಮೆಂಟ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎದುರಾಳಿಯನ್ನು ಎದುರಿಸುವ ಶಕ್ತಿ ಇದೆ. ಆ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು'' ಎಂದು ಅವರು ಹೇಳಿದರು.

ಬಳಿಕ ಮಾತನಾಡಿದ ಜಿಟಿ ದೇವೇಗೌಡ, ''ಎಚ್.ಡಿ.ದೇವೇಗೌಡರಿಗೆ  ನನ್ನ ಬಗ್ಗೆ ಪ್ರೀತಿ ಇದೆ. ಮರಿ ದೇವೇಗೌಡ ಎಂದು ನನ್ನನ್ನು ಕರೆಯುತ್ತಿದ್ದರು. ಜಿ.ಟಿ.ದೇವೇಗೌಡ ಪಕ್ಷ ಬಿಟ್ಟು ಹೋಗಲ್ಲ,  ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಎಚ್.ಡಿ.ದೇವೇಗೌಡರು  ಹೇಳಿದರು. ಅವರಿಗೆ ನನ್ನ ಮೇಲೆ ಇರುವ ವಿಶ್ವಾಸಕ್ಕೆ ಮನಸ್ಸು ತುಂಬಿ ಬಂದಿದೆ'' ಎಂದರು.

''ಹಿಂದೆ ಹಲವು ಸ್ಥಾನಮಾನವನ್ನು ಮಾಜಿ ಪ್ರಧಾನಿಗಳು ನನಗೆ ನೀಡಿದ್ದರು. ಮೂರು ವರ್ಷ ದೂರ ಇದ್ದರೂ ನನ್ನ ಬಗ್ಗೆ ಅವರಲ್ಲಿನ ಪ್ರೀತಿ ಕಡಿಮೆ ಆಗಿರಲಿಲ್ಲ. ಎಂದೂ ನನ್ನ ಬಗ್ಗೆ ಲಘುವಾಗಿ ಒಂದು ಮಾತನ್ನೂ ಆಡಲಿಲ್ಲ. ಅವರು ಪ್ರಾದೇಶಿಕ ಪಕ್ಷ ಕಟ್ಟಿ ಉಳಿಸಿ ಬೆಳೆಸಿದರು. ಎಚ್.ಡಿ.ದೇವೇಗೌಡರು  ಕಂಡ ಕನಸನ್ನು ನನಸು ಮಾಡುತ್ತೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ'' ಎಂದು ಭಾವುಕರಾದ ಜಿಟಿ ದೇವೇಗೌಡರು ಕಣ್ಣೀರಿಟ್ಟರು.

''ದೊಡ್ಡವರು ನನ್ನನ್ನು ಪ್ರೀತಿಯ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ನಾನು ಜೆಡಿಎಸ್ ನಲ್ಲೇ ಉಳಿಯುತ್ತೇನೆ. ಯಾವುದೇ ತ್ಯಾಗ ಮಾಡಲೂ ಸಿದ್ಧನಿದ್ದೇನೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಅದಕ್ಕಾಗಿಯೇ ದುಡಿಯುತ್ತೇನೆ. ಈಗ ನಮ್ಮಲ್ಲಿ ಯಾವುದೇ ಮುನಿಸು ಇಲ್ಲ, ಒಂದೇ ಒಂದು ದಿನ ಪಕ್ಷಕ್ಕೆ ಕಳಂಕ ಅಥವಾ ಧಕ್ಕೆ ತರುವ ಕೆಲಸ ಮಾಡಿಲ್ಲ'' ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

''ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರುವಂತೆ  ಕರೆದಿದ್ದರು. ಬಿಜೆಪಿಯವರೂ ಕರೆದಿದ್ದಾರೆ. ಆದರೆ ನಾನು ಜೆಡಿಎಸ್ ಬಿಟ್ಟು ಹೋಗಲ್ಲ'' ಎಂದು ಅವರು ಸ್ಪಷ್ಟಪಡಿಸಿದ

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕರುಗಳಾದ ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು  ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಜರಿದ್ದರು. ಜಿಟಿ ದೇವೇಗೌಡರ ಪತ್ನಿ ಲಲಿತಾ ಅವರು, ಅವರ ಪುತ್ರ ಜಿ.ಡಿ. ಹರೀಶ್ ಅವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X