Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತ್ಸ್ಯವಾಹಿನಿ ಯೋಜನೆಯಡಿ...

ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ,ತ್ರಿಚಕ್ರ ವಾಹನ ಬಿಡುಗಡೆ; ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ

ವಾರ್ತಾಭಾರತಿವಾರ್ತಾಭಾರತಿ20 Oct 2022 6:14 PM IST
share
ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ,ತ್ರಿಚಕ್ರ ವಾಹನ ಬಿಡುಗಡೆ; ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ

ಮಂಗಳೂರು, ಅ.20: ಮತ್ಸ್ಯವಾಹಿನಿ ಯೋಜನೆಯಡಿ ಗ್ರಾಮಾಂತರ ಭಾಗಕ್ಕೆ ಮೀನು ಸಾಗಾಟಕ್ಕೆ ಅನುಕೂಲ ವಾಗುವಂತೆ ರಾಜ್ಯಕ್ಕೆ 300 ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು ಬಿಡುಗಡೆಯಾಗಿದ್ದು, ಶೀಘ್ರ ಅವುಗಳನ್ನು ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ತೀರ್ಥರಾಮ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರರಿಗೆ ಸಹಕಾರ ಸಂಘಗಳಿಂದ ಸಾಲ ಕೊಡಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದ್ದು, ಶೀಘ್ರದಲ್ಲೇ ಇದು ಅನುಷ್ಠಾನಗೊಳ್ಳುವ ನಿರೀಕ್ಷೆಯಿದೆ ಎಂದರು.

ಮೀನುಗಾರಿಕೆ ವೇಳೆ ಮೃತಪಟ್ಟರೆ ರಾಜ್ಯ ಮತ್ತು ಕೇಂದ್ರದ ನೆರವು ಸೇರಿ ಒಟ್ಟು 11 ಲಕ್ಷ ರು. ಪರಿಹಾರಧನ ಸಿಗಲಿದೆ. ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 50 ಸಾವಿರ ರು.ವರೆಗೆ ಸಾಲ ಯೋಜನೆ ರೂಪಿಸ ಲಾಗಿದೆ. ಮೀನುಗಾರರ ಮಕ್ಕಳಿಗೆ 50 ಕೋಟಿ ರು. ವಿದ್ಯಾನಿಧಿ, 5 ಸಾವಿರ ಮೀನುಗಾರರಿಗೆ ಮನೆ ನಿರ್ಮಿಸಿ ಕೊಡುವ ಘೋಷಣೆಯನ್ನು ರಾಜ್ಯ ಸರ್ಕಾರ ಮಾಡಿದೆ. ಅಲ್ಲದೆ ಮೀನುಗಾರ ಸ್ತ್ರೀಶಕ್ತಿ ಸಂಘಗಳಿಗೆ 3 ಲಕ್ಷ ರೂ.ವರೆಗೆ ಸಹಾಯಧನ ಘೋಷಣೆ ಮಾಡಲಾಗಿದೆ. ಅಲ್ಲದೆ, ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತಿದೆ. ಮೀನುಗಾರರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಮುದ್ರ ಮೀನುಗಾರಿಕೆಯಲ್ಲಿ ಮೀನು ಉತ್ಪತ್ತಿ ಕಡಿಮೆಯಾಗುತ್ತಿದೆ. ಹಾಗಾಗಿ  ಒಳನಾಡು ಮೀನುಗಾರಿಕೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. 250 ಮೀನು ಮರಿಗಳನ್ನು ಉಚಿತವಾಗಿ ವಿತರಿಸುವುದರೊಂದಿಗೆ ಮೀನು ಕೃಷಿ ಮಾಡಲು 2 ಲಕ್ಷ ರು.ವರೆಗೆ ಸಾಲ ನೀಡುವ ಯೋಜನೆ ರೂಪಿಸಲಾಗಿದೆ. ಜತೆಗೆ ಐಸ್‌ಪ್ಲ್ಯಾಂಟ್, ಐಸೊಲೇಟೆಡ್ ವಾಹನ ನಿರ್ಮಿಸಲು ಸಬ್ಸಿಡಿ ಸಹಿತ ಸಾಲ ನೀಡಲಾಗುವುದು ಎಂದು ಅವರು ಹೇಳಿದರು. ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಗಣೇಶ್ ಹೊಸಬೆಟ್ಟು, ವಿಜಯಕುಮಾರ್ ಮತ್ತಿತರರಿದ್ದರು.

ದಂಡ ಪ್ರಮಾಣ ಹೆಚ್ಚಳ

ಕರ್ನಾಟಕದ ಮೀನುಗಾರರು ಮೀನುಗಾರಿಕೆ ವೇಳೆ ರಾಜ್ಯದ ಗಡಿ ದಾಟಿ  ಬೇರೆ ರಾಜ್ಯಗಳ ಗಡಿಯೊಳಗೆ ಹೋದರೆ ಅಲ್ಲಿ ಅಧಿಕ ದಂಡ ಹಾಕಲಾಗುತ್ತದೆ. ಬೇರೆ ರಾಜ್ಯದ ಮೀನುಗಾರರು ಕರ್ನಾಟಕ ಗಡಿ ದಾಟಿದರೆ ವಿಧಿಸಲಾಗುವ ದಂಡ ಪ್ರಮಾಣ ಕಡಿಮೆಯಾಗಿತ್ತು. ಅದನ್ನೀಗ 5 ಲಕ್ಷ ರೂ.ವರೆಗೂ ಏರಿಕೆ ಮಾಡಲಾಗಿದೆ. ಈ ಹೊಸ ನಿಯಮ ಈಗಾಗಲೇ ಜಾರಿಯಾಗಿದೆ ಎಂದು ತೀರ್ಥರಾಮ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X