Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್...

ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್ ಸೆಂಟರ್ ಆರಂಭ, 24 ಗಂಟೆಗಳೊಳಗೆ ಪರಿಹಾರ: ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ

ವಾರ್ತಾಭಾರತಿವಾರ್ತಾಭಾರತಿ20 Oct 2022 9:10 PM IST
share
ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಕಾಲ್ ಸೆಂಟರ್ ಆರಂಭ, 24 ಗಂಟೆಗಳೊಳಗೆ ಪರಿಹಾರ: ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ

ಬೆಂಗಳೂರು, ಅ.20: ‘ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಸಕ್ಕರೆ ಇಲಾಖೆಯಲ್ಲಿ ಕಾಲ್ ಸೆಂಟರ್ ಆರಂಭಿಸಲಾಗುವುದು. ಕಾಲ್ ಸೆಂಟರ್ ಮೂಲಕ ಸಲ್ಲಿಕೆಯಾಗುವ ಇಲಾಖೆಗೆ ಸಂಬಂಧಿಸಿದ ದೂರುಗಳಿಗೆ 24 ಗಂಟೆಗಳೊಳಗೆ ಪರಿಹಾರ ಒದಗಿಸಲಾಗುವುದು' ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದರು.

ಗುರುವಾರ ವಿಕಾಸಸೌಧದಲ್ಲಿ 2022-23ನೆ ಸಾಲಿನ ಹಂಗಾಮಿಗೆ ಕಬ್ಬು ಬೆಲೆ ನಿಗದಿ ಹಾಗೂ ಇತರೇ ಸಮಸ್ಯೆಗಳ ಕುರಿತು ಚರ್ಚಿಸಲು ಕರೆದಿದ್ದ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಸಕ್ಕರೆ ಇಲಾಖೆಯಲ್ಲಿನ ಮಾಹಿತಿ ತಲುಪಿಸಲು ಅಭಿವೃದ್ಧಿಪಡಿಸಿರುವ ಹೊಸ ‘ಆ್ಯಪ್’ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರಿಗೆ ಸಮನ್ವಯ ಸಾಧಿಸಿ ಕಾರ್ಖಾನೆಗಳು ಜರುಗಿಸುತ್ತಿರುವ ವ್ಯವಹಾರಗಳಲ್ಲಿ ಪಾರದರ್ಶಕತೆ ಮತ್ತು ಸಮರ್ಥತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಕ್ಕರೆ ಇಲಾಖೆಯಲ್ಲಿ ಮಾಹಿತಿ ಸಂಗ್ರಹಿಸಿ, ಕ್ರೋಢೀಕರಿಸಿ ರೈತರಿಗೆ ಅನುಗುಣವಾಗುವಂತೆ ಹೊಸ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ' ಎಂದು ಅವರು ಹೇಳಿದರು.

‘ಸಕ್ಕರೆ ಕಾರ್ಖಾನೆಗಳು ಸತತವಾಗಿ ಪಾವತಿಸುತ್ತಿರುವ ಕಬ್ಬಿನ ಬಿಲ್ಲು, ಸಕ್ಕರೆ ಇಳುವರಿ, ಬಾಕಿ ಇರುವ ಕಬ್ಬಿನ ಬಿಲ್ಲಿನ ಮೊತ್ತ, ಕಬ್ಬು ಪ್ರದೇಶ, ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ಹಾಗೂ ಇತರ ಉಪಉತ್ಪನ್ನಗಳಿಂದ ಬರುವ ಆದಾಯ ಹಾಗೂ ಆದಾಯ ಹಂಚಿಕೆ ವಿವರಗಳನ್ನು, ಸಕ್ಕರೆ ಮತ್ತು ಕಾಕಂಬಿ ದಾಸ್ತಾನು ವಿವರಗಳನ್ನು ನಿಖರವಾಗಿ ಮತ್ತು ತ್ವರಿತವಾಗಿ ಪಡೆಯಲು ಈ ಆ್ಯಪ್ ಹಾಗೂ ಸಾಫ್ಟ್‍ವೇರ್ ಬಿಡುಗಡೆ ಮಾಡಲಾಗಿದೆ' ಎಂದು ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದರು.  

‘ರಾಜ್ಯದಲ್ಲಿ 2021-22ನೆ ಸಾಲಿನಲ್ಲಿ 72 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯವನ್ನು ಕೈಗೊಂಡಿವೆ. ಸದರಿ ಹಂಗಾಮಿಗೆ 622.26 ಲಕ್ಷ ಮೆ.ಟನ್ ಕಬ್ಬನ್ನು ನುರಿಸಿ, 59,78 ಲಕ್ಷ ಮೆ.ಟನ್ ಸಕ್ಕರೆಯನ್ನು ಉತ್ಪಾದಿಸಿ, ಸಕ್ಕರೆ ಕಾರ್ಖಾನೆಗಳು, 19,919.90 ಕೋಟಿ ರೂ.ಪಾವತಿಸಿದೆ, ಬಾಕಿ ಮೊತ್ತ 2.49 ಕೋಟಿಗಳಷ್ಟು ಇದೆ ಎಂದು ಮಂಡಳಿಯ ಸದಸ್ಯರು ಸಭೆಯ ಗಮನಕ್ಕೆ ತಂದರು.

ಈ ತಿಂಗಳ ಅಂತ್ಯಕ್ಕೆ ಒಂದು ಕಾರ್ಖಾನೆ ಹಣವನ್ನು ಬಾಕಿ ಉಳಿಸಿಕೊಂಡಿದ್ದು, ಈ ತಿಂಗಳ ಅಂತ್ಯದಲ್ಲಿ ಹಣ ಪಾವತಿಸುವುದಾಗಿ ಸರಕಾರಕ್ಕೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಹೊಸ ಹಂಗಾಮು ಪ್ರಾರಂಭವಾಗುವ ಮೊದಲೇ ಸರಕಾರ ಕಳೆದ ಎರಡು ವರ್ಷಗಳಲ್ಲಿ ಶೇ.100ರಷ್ಟು ಹಣ ಪಾವತಿಸಲು ಕ್ರಮವಹಿಸಿದೆ. ಈ ಹಿನ್ನೆಲೆಯಲ್ಲಿ ಸಚಿವರ ಮತ್ತು ಸರಕಾರದ ಸಾಧನೆಗೆ ಸಭೆಯಲ್ಲಿದ್ದ ಮಂಡಳಿಯ ಸದಸ್ಯರು ಅಭಿನಂದಿಸಿದರು. 

ಸಭೆಯಲ್ಲಿ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಕೇರಿ, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎಫ್‍ಆರ್‍ಪಿ ಸಿಎಂ ಜೊತೆ ಚರ್ಚೆ: ‘ಕೇಂದ್ರ ಸರಕಾರ ನಿಗದಿಪಡಿಸಿರುವ ಎಫ್‍ಆರ್‍ಪಿಯಲ್ಲಿ ರಾಜ್ಯ ಸರಕಾರವು ಒಂದಷ್ಟು ಮೊತ್ತವನ್ನು ಹೆಚ್ಚುವರಿಯಾಗಿ ಸೇರಿಸಿ ನೀಡಬೇಕೆಂಬುದು ರೈತ ಮುಖಂಡರ ಬೇಡಿಕೆಯಾಗಿದ್ದು, ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಇವತ್ತಿನ ಸಭೆಯ ಪ್ರಮುಖ ಅಂಶಗಳೊಂದಿಗೆ ಮುಖ್ಯಮಂತ್ರಿಯನ್ನು ಶೀಘ್ರದಲ್ಲೆ ಭೇಟಿಯಾಗುತ್ತೇನೆ. ಸಕ್ಕರೆ ಇಲಾಖೆಯಲ್ಲಿನ ಸಿಬ್ಬಂದಿಗಳ ಕೊರತೆ ನೀಗಿಸಲು ಶೀಘ್ರದಲ್ಲೆ ನೇಮಕಾತಿ ಆರಂಭ ಮಾಡಲಾಗುವುದು'

-ಶಂಕರ್ ಪಾಟೀಲ್ ಮುನೇನಕೊಪ್ಪ, ಸಕ್ಕರೆ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X