ಗ್ರಾಮ ಪಂಚಾಯತ್ ಅಧ್ಯಕ್ಷರ ಆಯ್ಕೆ: ಚುನಾವಣಾಧಿಕಾರಿಗಳ ನೇಮಕ

ಉಡುಪಿ, ಅ.20: ಕುಂದಾಪುರ ತಾಲೂಕು ಹೆಂಗವಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖೆಯ ಕುಂದಾಪುರ ತಾಲೂಕು ಸಹಾಯಕ ನಿರ್ದೇಶಕ ರಾಘವೇಂದ್ರ ಆರ್. ಅವರನ್ನು ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.
Next Story





