ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಅ.20: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ -www.bcwd.karnataka.gov.in- ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-8050370006 ಅಥವಾ ಜಿಲ್ಲಾ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story





