Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದೇಶಿ ಕಂಪೆನಿಗಳಿಗೆ ಆಧಾರ್ ಕಾರ್ಡ್...

ವಿದೇಶಿ ಕಂಪೆನಿಗಳಿಗೆ ಆಧಾರ್ ಕಾರ್ಡ್ ಗುತ್ತಿಗೆ: ಸುಪ್ರೀಂನಲ್ಲಿ ಪರಿಹಾರ ಕಂಡುಕೊಳ್ಳುವಂತೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Oct 2022 9:48 PM IST
share
ವಿದೇಶಿ ಕಂಪೆನಿಗಳಿಗೆ ಆಧಾರ್ ಕಾರ್ಡ್ ಗುತ್ತಿಗೆ: ಸುಪ್ರೀಂನಲ್ಲಿ ಪರಿಹಾರ ಕಂಡುಕೊಳ್ಳುವಂತೆ ಹೈಕೋರ್ಟ್ ಸೂಚನೆ

ಬೆಂಗಳೂರು, ಅ.20: ಆಧಾರ್ ಕಾರ್ಡ್‍ನ (Aadhaar Card) ಬಯೋಮೆಟ್ರಿಕ್, ತಂತ್ರಾಂಶ(ಸಾಫ್ಟ್ ವೇರ್) ಮತ್ತು ದತ್ತಾಂಶ ಸಂಗ್ರಹಿಸಲು ಅಮೆರಿಕಾ ಮೂಲದ ನಾಲ್ಕು ಕಂಪೆನಿಗಳಿಗೆ ಗುತ್ತಿಗೆ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, (High Court of Karnataka) ಈ ಸಂಬಂಧ ಸರ್ವೋಚ್ಚ ನ್ಯಾಯಾಲಯದಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ಸೂಚನೆ ನೀಡಿತು.

ಈ ಕುರಿತಂತೆ ನಿವೃತ್ತ ಸೇನಾ ಅಧಿಕಾರಿ ಮ್ಯಾಥ್ಯೂ ಥಾಮಸ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ  ಸೂಚನೆ ನೀಡಿದೆ. 

ಆಧಾರ್ ದತ್ತಾಂಶ, ತಂತ್ರಾಂಶದ ಗುತ್ತಿಗೆ ವಿಚಾರವಾಗಿ ಈ ಹಿಂದೆ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಸಿದ್ದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‍ನಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚನೆ ನೀಡಿತು. ಜತೆಗೆ, ಸುಪ್ರೀಂಕೋರ್ಟ್ ಸೂಚನೆ ನೀಡಿದಲ್ಲಿ ಮತ್ತೆ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರಲಿದೆ ಎಂದು ತಿಳಿಸಿ ಅರ್ಜಿ ಇತ್ಯರ್ಥಪಡಿಸಿತು.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರವಾಗಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿದ್ದ ಸುಪ್ರೀಂಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು, ದೇಶದ ಪ್ರಜೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸುವುದು ಮತ್ತು ವರ್ಗಾಯಿಸುವ ಅಧಿಕಾರವನ್ನು ವಿದೇಶಿ ಕಂಪೆನಿಗಳಿಗೆ ನೀಡಲಾಗಿದೆ. ಪ್ರಸ್ತುತ ದೇಶದಲ್ಲಿ ಸಾಮಾನ್ಯ ಪ್ರಜೆಯಿಂದ ಸೇನಾ ಅಧಿಕಾರಿಗಳವರೆಗೂ ಆಧಾರ್ ಕಾರ್ಡ್ ಪಡೆದುಕೊಂಡಿದ್ದು, ಅವರ ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು ಲಿಂಕ್ ಮಾಡಲಾಗಿದೆ.

ಈ ಎಲ್ಲ ಮಾಹಿತಿ ವಿದೇಶಿ ಕಂಪೆನಿಗಳಿಗೆ ರವಾನೆ ಆದಲ್ಲಿ ದೇಶದ ಭದ್ರತೆಗೆ ಧಕ್ಕೆಯಾಗಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ಅಲ್ಲದೇ, ಸುಪ್ರೀಂಕೋರ್ಟ್‍ಗೆ ಇರುವ ಎಲ್ಲ ಅಧಿಕಾರ ಹೈಕೋರ್ಟ್‍ಗೂ ಇದೆ. ಹೀಗಾಗಿ, ಅರ್ಜಿ ವಿಚಾರಣೆಗೆ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಆಧಾರ್ ಕಾರ್ಡ್ ಸಂಬಂಧ ಗೌಪ್ಯತೆ ಹಕ್ಕು ಉಲ್ಲಂಘನೆ ವಿಚಾರವಾಗಿ ಅರ್ಜಿದಾರರು ಈ ಹಿಂದೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಇದೀಗ ಮತ್ತೆ ನಿಮ್ಮ ವಾದವನ್ನು ಸುಪ್ರೀಂಕೋರ್ಟ್ ಮುಂದೆ ಇಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ತಿಳಿಸಿ ಅರ್ಜಿ ಇತ್ಯರ್ಥ ಮಾಡಿತು.     

share
ವಾರ್ತಾಭಾರತಿ
ವಾರ್ತಾಭಾರತಿ
Next Story
X