ಕುಂದಾಪುರ: ಪೊಲೀಸರಿಂದ ತಪ್ಪಿಸಿ ಕಳವು ಪ್ರಕರಣದ ಬಂಧಿತ ಆರೋಪಿ ಪರಾರಿ

ಕುಂದಾಪುರ: ಮೊಬೈಲ್ ಅಂಗಡಿಯಲ್ಲಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದರು.
ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಿದ್ದರಿಂದ ಹಿರಿಯಡ್ಕದ ಸಬ್ ಜೈಲಿಗೆ ಕರೆದೊಯ್ಯುವಾಗ ಜೈಲ್ ಸಮೀಪದಿಂದ ಇಬ್ಬರು ಪೊಲೀಸರಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ.
ಭಟ್ಕಳ ಮೂಲದ ಮೊಹಮ್ಮದ್ ರಾಹಿಕ್ (22) ಪರಾರಿಯಾದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ತಿಂಗಳ ಹಿಂದೆ ಬೀಜಾಡಿ ಸಮೀಪದಲ್ಲಿ ಮೊಬೈಲ್ ಅಂಗಡಿಯಲ್ಲಿ ಕಳವು ಪ್ರಕರಣದಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿದೆ.
Next Story





