ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ವರ್ಗಾವಣೆ

ಡಾ. ರಾಜೇಂದ್ರ
ಮಂಗಳೂರು, ಅ.21: ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರನ್ನು ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸದ್ಯ ದ.ಕ.ಜಿಪಂ ಸಿಇಒ ಆಗಿರುವ ಡಾ.ಕುಮಾರ್ ಅವರಿಗೆ ದ.ಕ.ಜಿಲ್ಲಾಧಿಕಾರಿ ಹುದ್ದೆಯ ಪ್ರಭಾರ ವಹಿಸಲಾಗಿದೆ.
ಕೋವಿಡ್ ಹಾವಳಿ, ಲಾಕ್ಡೌನ್ ಮತ್ತು ಮಳೆಹಾನಿಯ ಸಂದರ್ಭ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಡಾ.ರಾಜೇಂದ್ರ ಕೆ.ವಿ. ತನ್ನ ಕೆಲಸ ಕಾರ್ಯಗಳಿಂದ ಅಪಾರ ಜನ್ನಮನ್ನಣೆಗೆ ಪಾತ್ರರಾಗಿದ್ದರು. ಹೊಸ ಆದೇಶದಂತೆ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕಾರ್ಯನಿರ್ವಹಿಸಲಿದ್ದಾರೆ.
ಡಾ.ಕುಮಾರ್ ಅವರು ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಸದ್ಯ ದ.ಕ.ಜಿಪಂ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ದ.ಕ.ಜಿಲ್ಲೆಯ ಸ್ಥಿತಿಗತಿಯ ಬಗ್ಗೆ ತಿಳಿದುಕೊಂಡಿರುವ ಡಾ. ಕುಮಾರ್ಗೆ ಜಿಪಂ ಸಿಇಒ ಜೊತೆಗೆ ದ.ಕ.ಜಿಲ್ಲಾಧಿಕಾರಿ ಹುದ್ದೆಯ ಪ್ರಭಾರ ವಹಿಸಿ ಸರಕಾರ ಆದೇಶ ಹೊರಡಿಸಿದೆ.




Next Story







