KPTCL ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಮತ್ತೆ 6 ಮಂದಿ ಆರೋಪಿಗಳ ಬಂಧನ
ಬೆಳಗಾವಿ, ಅ.21: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಮತ್ತೆ ಆರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಎಲ್ಲ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಗೋಕಾಕ್ ತಾಲೂಕಿನ ಬಗರನಾಳದ ಈರಣ್ಣ ಬಂಕಾಪೂರ(26), ಶಿವಾನಂದ ಕುಮೋಜಿ(22), ರಾಮದುರ್ಗ ತಾಲೂಕಿನ ಬಟಕುರ್ಕಿಯ ಆದಿಲ್ ಶಾ ತಾಸೇವಾಲೆ(23), ಮೂಡಲಗಿ ತಾಲೂಕಿನ ಖಾನಟ್ಟಿಯ ಮಹಾಂತೇಶ ಹೊಸಾಪೂರ(22), ಮೂಡಲಗಿ ತಾಲೂಕಿನ ನಾಗನೂರಿನ ಮಹಾಲಿಂಗ ಕುರಿ(30) ಹಾಗೂ ಸವದತ್ತಿ ತಾಲೂಕಿನ ಸುಂದರ ಬಾಳಿಕಾಯಿ(23) ಬಂಧಿತ ಆರೋಪಿಗಳಾಗಿದ್ದಾರೆ.
ಬಂಧಿತ ಎಲ್ಲ ಆರೋಪಿಗಳು ಆ.7ರಂದು ಗೋಕಾಕ್ ನಗರದಲ್ಲಿ ನಡೆದಿದ್ದ ಜ್ಯೂನಿಯರ್ ಕೆಪಿಟಿಸಿಎಲ್ ಅಸಿಸ್ಟಂಟ್ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಮೈಕ್ರೋಚಿಪ್ ಡಿವೈಸ್‍ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಅ.20ರಂದೇ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Next Story