ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ, ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವರೊಂದಿಗೆ ಮಾತುಕತೆ

ಯು.ಟಿ ಖಾದರ್
ಮಂಗಳೂರು : ಕಾಣಿಯೂರು ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣವನ್ನು, ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕ, ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಘಟನೆಯ ಬಗ್ಗೆ ಖಂಡನೆ ವ್ಯಕ್ತಪಡಿಸಿದ ಯು.ಟಿ.ಖಾದರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಮೀನ ಮೇಷ ಎಣಿಸಿದರೆ ಜಿಲ್ಲೆಯಲ್ಲಿ ಮತ್ತೆ ಇಂಥಹ ಘಟನೆಗಳು ಮರುಕಳಿಸಬಹುದು. ಆದುದರಿಂದ ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ತೆಗೆದುಕೊಳ್ಳುವ ಕಾನೂನು ಕ್ರಮವು ಮುಂದೆ ಇಂಥಹ ಘಟನೆಗಳು ನಡೆಸುವವರಿಗೆ ಪಾಠವಾಗಬೇಕೆಂದು ಒತ್ತಾಯಿಸಿದ್ದಾರೆ.
Next Story





