ಮಧ್ಯಪ್ರದೇಶ: ಟ್ರಕ್ಗೆ ಢಿಕ್ಕಿ ಹೊಡೆದ ಬಸ್, ಕನಿಷ್ಠ 15 ಕಾರ್ಮಿಕರು ಮೃತ್ಯು, 40 ಮಂದಿಗೆ ಗಾಯ

Photo:PTI
ರೇವಾ: ಮಧ್ಯಪ್ರದೇಶದ ರೇವಾದಲ್ಲಿನ ಹೆದ್ದಾರಿಯಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉತ್ತರಪ್ರದೇಶದ ಕನಿಷ್ಠ 15 ಕಾರ್ಮಿಕರು ಸಾವನ್ನಪ್ಪಿದ್ದಾರೆ ಹಾಗೂ 40 ಮಂದಿ ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ
ಸುಮಾರು 100 ಜನರಿದ್ದ ಬಸ್ ಉತ್ತರ ಪ್ರದೇಶದ ಗೋರಖ್ಪುರಕ್ಕೆ ತೆರಳುತ್ತಿದ್ದಾಗ ನಿನ್ನೆ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಕಾರಣ ಟ್ರಕ್ ಹೆದ್ದಾರಿಯಲ್ಲಿ ಸಿಲುಕಿಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಬಸ್ ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ಸುಹಗಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಜನರು ಉತ್ತರ ಪ್ರದೇಶದ ಕಾರ್ಮಿಕರು. ಅವರು ಮಧ್ಯಪ್ರದೇಶದ ಕಟ್ನಿಯಿಂದ ಬಸ್ ಹತ್ತಿದ್ದಾರೆ. ಕಾರ್ಮಿಕರು ಹೈದರಾಬಾದ್ನಿಂದ ಪ್ರತ್ಯೇಕ ಬಸ್ನಲ್ಲಿ ಕಟ್ನಿಗೆ ಬಂದಿದ್ದರು. ಅವರು ದೀಪಾವಳಿ ಹಬ್ಬಕ್ಕಾಗಿ ಮನೆಗೆ ಹೋಗುತ್ತಿದ್ದರು ಎಂದು ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ತಿಳಿಸಿದ್ದಾರೆ.







