Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ...

ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಭದ್ರಾ ಮೇಲ್ದಂಡೆ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ22 Oct 2022 12:20 PM IST
share
ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಭದ್ರಾ ಮೇಲ್ದಂಡೆ ಯೋಜನೆ: ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯನ್ನು  ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿಯಿದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇ‌‌‌ಳಿದರು.

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಶನಿವಾರ ಹೊಸದುರ್ಗ ಪಟ್ಟಣಕ್ಕೆ ಆಗಮಿಸಿದ ಸಿಎಂ, ಹೆಲಿಪ್ಯಾಡ್ ಬಳಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಜಲಸಂಪನ್ಮೂಲ ಸಚಿವರು ಯೋಜನೆ ಕುರಿತು ಕಾರ್ಯೋನ್ಮುಖರಾಗಿದ್ದಾರೆ. ವೈಯಕ್ತಿಕವಾಗಿ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಇದರಿಂದಾಗಿ ಯೋಜನೆಗೆ ಬಹಳ ದೊಡ್ಡ ಹಣಕಾಸಿನ ನೆರವು ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು ದಾವಣಗೆರೆ ನೇರ ರೈಲು ಮಾರ್ಗ. ಈ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ  ನೀಡಿದ್ದೇನೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ ರೂ. 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.

ಅಬ್ಬಿನ‌ಹೋಳೆ ಯೋಜನೆಯಲ್ಲಿ ಭೂಮಿ ನೀಡಿದ ರೈತರಿಂದ ಕೆಲವು ಕಾರಣಗಳಿಂದ ಅಡಚಣೆ ಉಂಟಾಗಿದೆ. ಇದನ್ನು ಬಗೆಹರಿಸಲಾಗುವುದು ಎಂದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ದೆಹಲಿ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ರಾಜಕೀಯ ಸನ್ನಿವೇಶದಲ್ಲಿ ಕೆಲವು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಲಭಿಸಿಲ್ಲ. ಈ ವಿಚಾರ ಗಮನದಲ್ಲಿದೆ ಎಂದರು.

ಸರ್ಕಾರಿ ನೌಕರರ 7ನೇ ವೇತನ  ಆಯೋಗವನ್ನು ಶೀಘ್ರವಾಗಿ ರಚನೆ ಮಾಡಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸಿದರು.

ಈ ಸಂದರ್ಭದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್,  ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಶಾಸಕ ನವೀನ್  ಸೇರಿದಂತೆ ಇತರೆ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X