ವ್ಯಾಪಾರಿಗಳಿಗೆ ಹಲ್ಲೆ: ಮುಸ್ಲಿಂ ಜಮಾಅತ್ ಖಂಡನೆ

ಉಡುಪಿ, ಅ.22: ಕಡಬ ಕಾಣಿಯೂರಿನಲ್ಲಿ ಮುಸ್ಲಿಂ ಬಟ್ಟೆ ವ್ಯಾಪಾರಿಗಳಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ಕ್ರಮವನ್ನು ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ ಹಾಗೂ ಆರೋಪಿಗಳ ಶೀಘ್ರ ಬಂಧನಕ್ಕ ಒತ್ತಾಯಿಸಿದೆ.
ಭಾರತ ಪ್ರಜಾಪ್ರಭುತ್ವ ದೇಶ. ಇಲ್ಲಿನ ಪ್ರಜೆಗಳಿಗೆ ದೇಶದ ಯಾವುದೇ ಭಾಗದಲ್ಲಿಯೂ ವ್ಯಾಪಾರ ವಹಿವಾಟು ನಡೆಸುವ ಅವಕಾಶವಿದೆ. ವ್ಯಾಪಾರಿ ಗಳಿಂದ ತಪ್ಪಾಗಿದ್ದಲ್ಲಿ ಅದಕ್ಕೆ ಶಿಕ್ಷೆಯನ್ನು ನೀಡಲು ಪೊಲೀಸರಿದ್ದಾರೆ ಮತ್ತು ನ್ಯಾಯಾಲಯಗಳಿವೆ. ಅದರ ಬದಲು ಕೆಲವು ಸಮಾಜ ವಿರೋಧಿಗಳು ಕಾನೂನನ್ನು ಕೈಗೆತ್ತಿಕೊಂಡಿರುವುದು ಸರಿಯಲ್ಲ. ಕಾನೂನನ್ನು ಕೈಗೆತ್ತಿಕೊಂಡ ಆರೋಪಿಗಳನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಪೊಲೀಸ್ ಇಲಾಖೆ ಶೀಘ್ರವಾಗಿ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸಮಿತಿಯು ಪ್ರಕಟಣೆಯಲ್ಲಿ ಒತ್ತಾಯಿಸಿದೆ.
Next Story





