ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ನಟಿ ರಮ್ಯಾ
ರಾಯಚೂರು: ರಾಯಚೂರು ನಗರದಲ್ಲಿ ಸಾಗುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಅವರ ಭಾರತ್ ಜೋಡೊ ಪಾದಯಾತ್ರೆಯಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಭಾಗಿಯಾಗಿದ್ದಾರೆ.
ಸಂಜೆ 4 ಗಂಟೆ ವೇಳೆ ಮಂತ್ರಾಲಯ ಮಾರ್ಗದ ವೃಂದಾವನ ಹೋಟೆಲ್ನಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ದೊಡ್ಡ ಸಂಖ್ಯೆಯ ಜನರು ಭಾಗವಹಿಸಿದ್ದು, ಸಕ್ರಿಯ ರಾಜಕಾರಣದಿಂದ ದೂರ ಉಳಿದಿರುವ ನಟಿ ರಮ್ಯಾ ಅವರು, ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಿದ್ದು ಕುತೂಹಲ ಮೂಡಿಸಿದೆ.
ಇನ್ನು ನಗರದ ಬಸವೇಶ್ವರ ವೃತ್ತ ಪಕ್ಕದ ವಾಲ್ಕಟ್ ಮೈದಾನದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ರಾಹುಲ್ಗಾಂಧಿ ಅವರು ಜನರನ್ನುದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ: ಅವರ ತಾಳ್ಮೆ, ಪರಿಶ್ರಮ, ದೃಢ ಸಂಕಲ್ಪಕ್ಕೆ ನನ್ನದೊಂದು ಸಲಾಂ: ರಾಹುಲ್ ಗಾಂಧಿ ಫೋಟೋ ಹಂಚಿಕೊಂಡ ಸಿದ್ದರಾಮಯ್ಯ
ಈ ವೇಳೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಬಿ.ಕೆ.ಹರಿಪ್ರಸಾದ್, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.