ಮಡಾಮಕ್ಕಿ ಗ್ರಾಪಂ ಅಧ್ಯಕ್ಷೆ ಮನೆಯಲ್ಲಿ ಕಳವು
ಅಮಾಸೆಬೈಲು : ಮಡಾಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮನೆಗೆ ಅ.೨೧ರಂದು ಹಾಡುಹಗಲೇ ನುಗ್ಗಿ ಅಪಾರ ಮೌಲ್ಯದ ನಗನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಗ್ರಾಪಂ ಅಧ್ಯಕ್ಷೆ ಜಯಲಕ್ಷ್ಮಿ ನಾಯಕ್ ಕಚೇರಿಗೆ ಹೋಗಿದ್ದ ವೇಳೆ ಮನೆಯ ಎದುರಿನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮೊಬೈಲ್ ಹಾಗೂ ಉಂಗುರ ಹಾಗೂ ೪೫,೦೦೦ರೂ. ನಗದು ಕಳವು ಮಾಡಿದ್ದಾರೆ. ಇವುಗಳ ಒಟ್ಟು ಮೌಲ್ಯ ೯೦,೦೦೦ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story