ಬೈಂದೂರು ಸೊಸೈಟಿಗೆ ನುಗ್ಗಿ ಕಳವಿಗೆ ಯತ್ನ

ಬೈಂದೂರು : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಬೈಂದೂರು ಶಾಖೆಗೆ ಅ.21ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಕಳವಿಗೆ ಯತ್ನಿಸಿರುವ ಬಗ್ಗೆ ವರದಿಯಾಗಿದೆ.
ಬ್ಯಾಂಕಿನ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳಪ್ರವೇಶಿಸಿದ ಕಳ್ಳರು, ಕಿಟಕಿಗಳಿಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಟಾರ್ಪಲನ್ನು ಹಾಕಿ, ವೆಲ್ಡಿಂಗ್ ಮೆಷಿನ್ ನಿಂದ ಲಾಕರ್‌ನ್ನು ತೆರೆಯಲು ಪ್ರಯತ್ನಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





