ದೀಪಾವಳಿ; ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು: ಸಚಿವ ಶ್ರೀರಾಮುಲು ಎಚ್ಚರಿಕೆ
ಬಳ್ಳಾರಿ: 'ಹಬ್ಬದ ನೆಪದಲ್ಲಿ ಖಾಸಗಿ ಬಸ್‌ಗಳು ಸೇರಿದಂತೆ ಇತರೆ ಪ್ರಯಾಣಿಕರ ವಾಹನಗಳು ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿದರೆ ಅವರ ಪರವಾನಗಿ ರದ್ದುಪಡಿಸಲಾಗುವುದು' ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಖಾಸಗಿಯವರು ಯಾವುದೇ ಕಾರಣಕ್ಕೂ ಹೆಚ್ಚಿಗೆ ಪ್ರಯಾಣ ಶುಲ್ಕ ಪಡೆಯುವಂತಿಲ್ಲ. ಹೆಚ್ಚಿಗೆ ಪ್ರಯಾಣ ಶುಲ್ಕ ಪಡೆಯುವವರ ಮೇಲೆ ನಿಗಾ ಇಡಲು ಟಾಸ್ಕ್‌ಫೋರ್ಸ್ ರಚಿಸಲಾಗಿದೆ' ಎಂದು ತಿಳಿಸಿದರು.
Next Story