ಆಳಂದ, ಚಿತ್ತಾಪುರದ 'ಜನಸಂಕಲ್ಪ ಯಾತ್ರೆ' ಮುಂದೂಡಿಕೆ: ತೇಲ್ಕೂರ
ಕಲಬುರಗಿ, ಅ.23: ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ನಿಧನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿನ (ಅ.23) ಕಲಬುರಗಿ ಪ್ರವಾಸ ರದ್ದುಗೊಳಿಸಿದ್ದಾರೆ. ಅದೇರೀತಿ ಇಂದು ಆಳಂದ ಹಾಗೂ ಚಿತ್ತಾಪುರದಲ್ಲಿ ನಡೆಯಬೇಕಿದ್ದ 'ಜನಸಂಕಲ್ಪ ಯಾತ್ರೆ'ಯನ್ನು ಮುಂದೂಡಲಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ, ವಿಭಾಗೀಯ ಪ್ರಭಾರಿ ಮತ್ತು ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷ ಆನಂದ್ ಚಂದ್ರಶೇಖರ್ ಮಾಮಿನಿ ಅವರ ಹಠಾತ್ ನಿಧನ ಆಘಾತ ಉಂಟು ಮಾಡಿದ್ದು, ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಾಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ದಿಢೀರ್ ಅಗಲಿಕೆಯಿಂದ ಕರ್ನಾಟಕದ ಸಂಸದೀಯ ವ್ಯವಸ್ಥೆಗೆ ತುಂಬಾಲಾರದ ನಷ್ಟವಾಗಿದೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮುಖ್ಯಮಂತ್ರಿ ಜಿಲ್ಲಾ ಪ್ರವಾಸ ರದ್ದುಗೊಳಿಸಿದ್ದಾರೆ. ಅದೇರೀತಿ ಅ.23ರಂದು ಆಳಂದ ಹಾಗೂ ಚಿತ್ತಾಪುರದಲ್ಲಿ ನಡೆಬೇಕಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯನ್ನು ಮುಂದೂಡಲಾಗಿದೆ. ನವೆಂಬರ್ 6ರಂದು ನಡೆಯಲಿದೆ ಎಂದು ತೇಲ್ಕೂರ ತಿಳಿಸಿದ್ದಾರೆ.