Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇ-ವಾಹನಗಳ ಸಾಧಕ-ಬಾಧಕಗಳು

ಇ-ವಾಹನಗಳ ಸಾಧಕ-ಬಾಧಕಗಳು

ದಿವ್ಯಶ್ರೀ ವಿ. ಬೆಂಗಳೂರುದಿವ್ಯಶ್ರೀ ವಿ. ಬೆಂಗಳೂರು23 Oct 2022 12:22 PM IST
share
ಇ-ವಾಹನಗಳ  ಸಾಧಕ-ಬಾಧಕಗಳು

ಕಳೆದ ಕೆಲವು ದಶಕಗಳಲ್ಲಿ ಪಾಶ್ಚಾತ್ಯ ದೇಶಗಳಲ್ಲಿ ಜನಪ್ರಿಯತೆ ಗಳಿಸಿರುವ ವಿದ್ಯುತ್‌ಚಾಲಿತ ವಾಹನಗಳು (ಇವಿ) ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲೂ ಬಳಕೆಗೆ ಬರುತ್ತಿದೆ. ಅನೇಕರು ಪೆಟ್ರೋಲ್, ಡೀಸೆಲ್ ವಾಹನಗಳನ್ನು ಮಾರಾಟ ಮಾಡಿ, ಇವಿಗಳನ್ನು ಖರೀದಿಸುತ್ತಿದ್ದಾರೆ. ಟಾಟಾ, ಮರ್ಸಿಡೀಸ್, ವೊಲ್ವೊ, ಹುಂಡೈ ಸೇರಿದಂತೆ ದೊಡ್ಡದೊಡ್ಡ ಕಾರು ಉತ್ಪಾದನಾ ಕಂಪೆನಿಗಳು ಇವಿ ಉತ್ಪಾದನೆಯನ್ನು ಆರಂಭಿಸುತ್ತಿವೆ. ಹಾಗಿದ್ದರೆ ಇಲೆಕ್ಟ್ರಿಕ್ ವಾಹನಗಳನ್ನು ಕೊಳ್ಳುವುದು ನಿಜಕ್ಕೂ ಉತ್ತಮವೇ? ಇವುಗಳ ಖರೀದಿಯಿಂದಾಗುವ ಲಾಭ-ನಷ್ಟಗಳೇನು? ಇವಿ ಖರೀದಿಸುವಾಗ ಯಾವೆಲ್ಲ ವಿಷಯಗಳನ್ನು ಯೋಚಿಸಬೇಕು? ತಿಳಿಯೋಣ ಬನ್ನಿ.

ದುಬಾರಿ ಬೆಲೆ

ಪ್ರಸಕ್ತ ಪೆಟ್ರೋಲ್, ಡೀಸೆಲ್ ಕಾರುಗಳಿಗೆ ಹೋಲಿಕೆ ಮಾಡಿದರೆ ಇಲೆಕ್ಟ್ರಿಕ್ ವಾಹನಗಳ ಬೆಲೆ ಸ್ವಲ್ಪ ಹೆಚ್ಚಾಗಿರುತ್ತದೆ. ಆದರೆ ಒಮ್ಮೆ ಬಂಡವಾಳ ಹಾಕಿದರೆ, ನಂತರ ನಿರ್ವಹಣೆಗೆ ಇವಿ ಬಳಕೆದಾರರು ಹೆಚ್ಚು ಹಣ ಖರ್ಚು ಮಾಡಬೇಕೆಂದಿಲ್ಲ. ಈಗಿನ ಪೆಟ್ರೋಲ್, ಡೀಸೆಲ್ ಬೆಲೆಗೆ ಹೋಲಿಕೆ ಮಾಡಿದರೆ ಇವಿಗಳನ್ನು ಕಡಿಮೆ ವೆಚ್ಚದಲ್ಲಿ ಓಡಿಸಬಹುದು. ಅಲ್ಲದೇ, ಮಾರುಕಟ್ಟೆಯಲ್ಲಿ ಇವಿಗಳ ಬೆಲೆ ಕಡಿಮೆಯಾಗುತ್ತಿದೆ.

ಚಾರ್ಜಿಂಗ್ ವ್ಯವಸ್ಥೆ

ಸ್ವಂತ ಮನೆಯಾಗಿದ್ದರೆ ನಮಗೆ ಬೇಕಾದಂತೆ ವಾಹನ ಚಾರ್ಜಿಂಗ್ ವ್ಯವಸ್ಥೆಯನ್ನು ಮನೆಯಲ್ಲಿ ಮಾಡಿಕೊಳ್ಳಬಹುದು. ಆದರೆ ಬಾಡಿಗೆ ಮನೆಯಾದರೆ ಇವಿಯನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ವಿದ್ಯತ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಮನೆ ಮಾಲಕರ ಅನುಮತಿ ಪಡೆಯಬೇಕಾಗುತ್ತದೆ. ಇವಿ ಖರೀದಿಸುವ ಮುನ್ನವೇ ಈ ಬಗ್ಗೆ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು.

ಚಾರ್ಜಿಂಗ್ ಪಾಯಿಂಟ್

ಪೆಟ್ರೋಲ್ ಬಂಕ್‌ಗಳು ಅಲ್ಲಲ್ಲಿ ಲಭ್ಯವಿರುವಂತೆ ಇವಿ ಚಾರ್ಜಿಂಗ್ ಪಾಯಿಂಟ್‌ಗಳು ಇನ್ನೂ ವ್ಯಾಪಕವಾಗಿ ಆರಂಭವಾಗಿಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ಇವುಗಳ ತೀವ್ರ ಕೊರತೆಯಿದೆ. ಆದ್ದರಿಂದ ದೂರ ಪ್ರಯಾಣ ಮಾಡುವವರು ಇವಿ ಕಾರು ಬಳಸುವಾಗ ತುಂಬಾ ಯೋಚಿಸಬೇಕಾಗುತ್ತದೆ. ವಾಹನವನ್ನು ಒಮ್ಮೆ ಚಾರ್ಜ್ ಮಾಡಿದರೆ ಎಷ್ಟು ದೂರ ಓಡಿಸಬಹುದು ಎಂಬುದನ್ನು ಮೊದಲೇ ತಿಳಿದುಕೊಂಡು ನಂತರವಷ್ಟೇ ಪ್ರಯಾಣದ ಯೋಜನೆ ಮಾಡಿಕೊಳ್ಳಬೇಕು.

ಪರಿಸರ ಸಂರಕ್ಷಣೆ

ಇಂಧನ ತೈಲಗಳನ್ನು ಬಳಸುವ ವಾಹನಗಳು ಇಂಗಾಲವನ್ನು ಹೊರಸೂಸಿ ವಾಯುಮಾಲಿನ್ಯ ಉಂಟುಮಾಡುತ್ತವೆ. ಆದರೆ ಇವಿಯಿಂದ ಯಾವುದೇ ಕೆಟ್ಟ ಅನಿಲ ಹೊರಬಾರದ ಕಾರಣ ಪರಿಸರ ಸಂರಕ್ಷಣೆ ದೃಷ್ಟಿಯಲ್ಲಿ ಇವಿ ಉತ್ತಮವೆನ್ನಲಾಗುತ್ತಿದೆ. ಈ ಕಾರಣಕ್ಕಾಗಿ ಸರಕಾರಗಳು ಇವಿಯನ್ನು ಪ್ರೋತ್ಸಾಹಿಸುತ್ತಿದೆ. ಆದರೆ ಇವಿಯನ್ನು ಉತ್ಪಾದಿಸುವ ಸಂದರ್ಭದಲ್ಲೇ ಪರಿಸರ ಮಾಲಿನ್ಯವಾಗುತ್ತದೆ ಎಂಬ ವಾದ ಕೂಡ ಇದೆ.

13 ಲಕ್ಷ ವಾಹನಗಳು

ಭಾರತದಲ್ಲಿ ಇಲೆಕ್ಟ್ರಿಕ್ ವಾಹನಗಳ ಬಳಕೆ ವೇಗವಾಗಿ ಹೆಚ್ಚುತ್ತಿದ್ದು, ಈಗ 13 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿವೆ ಎಂದು ಕೇಂದ್ರ ಸರಕಾರ ಆಗಸ್ಟ್‌ನಲ್ಲಿ ತಿಳಿಸಿತ್ತು. ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ಸಂಖ್ಯೆ 5.44 ಲಕ್ಷ, ತ್ರಿಚಕ್ರ ವಾಹನಗಳು 7.93 ಲಕ್ಷ ಹಾಗೂ ನಾಲ್ಕು ಚಕ್ರದ ವಾಹನಗಳು 54 ಸಾವಿರಕ್ಕೂ ಅಧಿಕವಿದೆ ಎಂದು ಕೇಂದ್ರ ಸಚಿವರು ರಾಜ್ಯಸಭೆಯಲ್ಲಿ ತಿಳಿಸಿದ್ದರು. 2020-21ಕ್ಕೆ ಹೋಲಿಕೆ ಮಾಡಿದರೆ 2021-22ರಲ್ಲಿ ಇವಿ ಖರೀದಿ ಪ್ರಮಾಣವು ದೇಶದಲ್ಲಿ ಮೂರು ಪಟ್ಟು ಹೆಚ್ಚಾಗಿದೆ.

share
ದಿವ್ಯಶ್ರೀ ವಿ. ಬೆಂಗಳೂರು
ದಿವ್ಯಶ್ರೀ ವಿ. ಬೆಂಗಳೂರು
Next Story
X