Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಹುಲ್ ಗಾಂಧಿ ಎಂದರೆ ಯಾರು,...

ರಾಹುಲ್ ಗಾಂಧಿ ಎಂದರೆ ಯಾರು, ಏನೆಂಬುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ23 Oct 2022 12:45 PM IST
share
ರಾಹುಲ್ ಗಾಂಧಿ ಎಂದರೆ ಯಾರು, ಏನೆಂಬುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯ

ಬೆಂಗಳೂರು, ಅ.23: ರಾಹುಲ್ ಗಾಂಧಿಯವರ ನೇತೃತ್ವದ ಭಾರತ ಐಕ್ಯತಾ ಯಾತ್ರೆ(Bharat Jodo Yatra) ಕರ್ನಾಟಕದಿಂದ ನಿರ್ಗಮಿಸಿರಬಹುದು. ಆದರೆ ಯಾತ್ರೆ ಮೂಡಿಸಿದ ಜಾಗೃತಿ, ಹುಟ್ಟಿಸಿದ ಭರವಸೆ ಮತ್ತು ಸಾರಿದ ಐಕ್ಯ ಸಂದೇಶದಿಂದ ಪ್ರೇರಣೆ ಪಡೆದ ಪ್ರಜಾಪ್ರಭುತ್ವದ ರಕ್ಷಣೆಯ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಭಾರತ ಐಕ್ಯತಾ ಯಾತ್ರೆ ಇಂದು ರಾಜ್ಯದಲ್ಲಿ ಯಶಸ್ವಿಯಾಗಿ ತನ್ನ ನಡಿಗೆ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಜಾತಿ, ಮತ, ಪಂಥ, ಪಕ್ಷಗಳ ಭೇದವನ್ನು ಮರೆತು ನಮ್ಮ ಜೊತೆ ಹೆಜ್ಜೆ ಹಾಕಿ ಭಾರತ ಐಕ್ಯತಾ ಯಾತ್ರೆಯನ್ನು ಯಶಸ್ಸಿಯನ್ನಾಗಿ ಮಾಡಿದ ಕರ್ನಾಟಕದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು. ಪುಟ್ಟಬಾಲಕ-ಬಾಲಕಿಯರು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ವೃದ್ಧರು, ಕಾರ್ಮಿಕರು, ರೈತರು, ಕುಶಲಕರ್ಮಿಗಳು, ಸೈನಿಕರು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಭಾಗವಹಿಸಿ ಭಾರತ ಐಕ್ಯತಾ ಯಾತ್ರೆಯ ಸಂದೇಶವನ್ನು ಅರ್ಥಪೂರ್ಣವಾಗಿಸಿದರು ಎಂದು ಹೇಳಿದ್ದಾರೆ.

ಸಮಾಜವನ್ನು ಒಡೆಯುವ ಮೂಲಕವೇ ರಾಜಕೀಯ ಗೆಲುವನ್ನು ಪಡೆಯುತ್ತಾ ಬಂದ ಬಿಜೆಪಿಯ ವಿಚ್ಛಿದ್ರಕಾರಿ ಅಜೆಂಡಾಕ್ಕೆ ಪ್ರತಿಯಾಗಿ ಸಮಾಜವನ್ನು ಕೂಡಿ ಕಟ್ಟಬೇಕೆಂಬ ಸಂಕಲ್ಪದಿಂದ ಭಾರತ ಜೋಡೊ ಯಾತ್ರೆ ಕೈಗೊಡಿರುವ ರಾಹುಲ್ ಗಾಂಧಿಯವರಿಗೆ ಕರ್ನಾಟಕ ಆಭಾರಿಯಾಗಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಹೇಳುತ್ತಾ ಬಂದಂತೆ ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಆಗಿರದೆ ಸಮಸ್ತ ಜನತೆಯ ಕಾರ್ಯಕ್ರಮವನ್ನಾಗಿ ಮಾಡಿದ ಕರ್ನಾಟಕದ ಜನ ಭವಿಷ್ಯದಲ್ಲಿ ಭರವಸೆ ಹುಟ್ಟಿಸಿದ್ದಾರೆ ಎಂದರು.

ಸುಳ್ಳು, ವ್ಯವಸ್ಥಿತವಾದ ಅಪಪ್ರಚಾರ, ನಿಂದನೆಗಳ ಮೂಲಕ ರಾಹುಲ್ ಗಾಂಧಿಯವರ ಚಾರಿತ್ರ್ಯಹನನ ಮಾಡುತ್ತಾ ಬಂದವರಿಗೆ ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ ಐಕ್ಯತಾ ಯಾತ್ರೆ ಪ್ರತ್ಯಕ್ಷವಾಗಿ ತೋರಿಸಿಕೊಟ್ಟಿದೆ ಎಂದ ಸಿದ್ದರಾಮಯ್ಯ, ಸರ್ವಾಧಿಕಾರ, ದುರಾಡಳಿತ, ಕೋಮು ಧ್ರುವೀಕರಣದ ಅಜೆಂಡಾ ವಿರುದ್ದದ ಜನತೆಯ ಹೋರಾಟಕ್ಕೆ ಭಾರತ ಐಕ್ಯತಾ ಯಾತ್ರೆ ಸ್ಫೂರ್ತಿ ಕೊಟ್ಟಿದೆ. ನಮ್ಮ ಎಲ್ಲ ನಾಯಕರು ಮತ್ತು ಕಾರ್ಯಕರ್ತರಿಗೆ ಜನಮನವನ್ನು ಇನ್ನಷ್ಟು ಅರ್ಥಮಾಡಿಕೊಳ್ಳಲು ನೆರವಾಗಿದೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X