Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಸಿಡಿಎ, ಕಂದಾಯ, ಪೊಲೀಸ್...

ಚಿಕ್ಕಮಗಳೂರು: ಸಿಡಿಎ, ಕಂದಾಯ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ, ಅನಧಿಕೃತ ರೆಸಾರ್ಟ್‍ಗೆ ಬೀಗ

ವಾರ್ತಾಭಾರತಿವಾರ್ತಾಭಾರತಿ23 Oct 2022 6:57 PM IST
share
ಚಿಕ್ಕಮಗಳೂರು: ಸಿಡಿಎ, ಕಂದಾಯ, ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ, ಅನಧಿಕೃತ ರೆಸಾರ್ಟ್‍ಗೆ ಬೀಗ

ಚಿಕ್ಕಮಗಳೂರು: ಕೃಷಿ ಜಮೀನಿನಲ್ಲಿ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ನಡೆಸಲಾಗುತ್ತಿದ್ದ ರೆಸಾರ್ಟ್ ಮೇಲೆ ನಗರಾಭಿವೃದ್ಧಿ ಪ್ರಾಧಿಕಾರ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿ ರೆಸಾರ್ಟ್‍ಗೆ ಬೀಗ ಹಾಕಿದ ಘಟನೆ ರವಿವಾರ ನಗರ ಸಮೀಪದ ಅಲ್ಲಂಪುರ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಅಲ್ಲಂಪುರ ಗ್ರಾಪಂ ವ್ಯಾಪ್ತಿಯಲ್ಲಿರುವ ಅನಧಿಕೃತ ರೆಸಾರ್ಟ್ ಒಂದರ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳ ತಂಡ ಪರವಾನಿಗೆ, ಸೂಕ್ತ ದಾಖಲೆಗಳಿಲ್ಲದಿರುವುದನ್ನು ಪರಿಶೀಲಿಸಿ ರೆಸಾರ್ಟ್ ಬೀಗ ಹಾಕಿದ್ದಾರೆ.

ಈ ವೇಳೆ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಅನಂದ್, ಸೆವೆಲ್ ಹಿಲ್ ರೆಸಾರ್ಟ್ ಇರುವ ಜಾಗ ಕೃಷಿ ಭೂಮಿಯಾಗಿದ್ದು, ಹಸಿರು ವಲಯದಲ್ಲಿದೆ. ಅಲ್ಲದೇ ಭೂ ಪರಿವರ್ತನೆಯನ್ನೂ ಮಾಡಿಲ್ಲ. ಜಾಗಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲಕರ ಬಳಿ ಸೂಕ್ತ ದಾಖಲೆಗಳೂ ಇಲ್ಲ. ಈ ಹಿಂದೆ ರೆಸಾರ್ಟ್ ಮಾಲಕರಿಗೆ ನೋಟಿಸ್ ನೀಡಿ ರೆಸಾರ್ಟ್ ಅನ್ನು ಮುಚ್ಚಿಸಲಾಗಿತ್ತು. ಆದರೆ ಮಾಲಕರು ರೆಸಾರ್ಟ್‍ನ ಮತ್ತೊಂದು ಗೇಟ್ ಮೂಲಕ ಗ್ರಾಹಕರನ್ನು ಆಹ್ವಾನಿಸಿ ಕೊಠಡಿಗಳನ್ನು ಬಾಡಿಗೆಗೆ ನೀಡಿ ವ್ಯವಹಾರವನ್ನು ಅಕ್ರಮವಾಗಿ ನಡೆಸುತ್ತಿದ್ದರು. ಅಕ್ರಮ ರೆಸಾರ್ಟ್ ಬಗ್ಗೆ ಸ್ಥಳೀಯ ಗ್ರಾಮಸ್ಥರಿಂದ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ರವಿವಾರ ಜಂಟಿ ದಾಳಿ ನಡೆಸಿ ರೆಸಾರ್ಟ್‍ಗೆ ಬೀಗ ಹಾಕಲಾಗಿದೆ ಎಂದರು.

ಕೃಷಿ ಭೂಮಿಯಾಗಿರುವ ಹಿನ್ನೆಲೆಯಲ್ಲಿ ಕಳೆದ 1 ವರ್ಷದ ಹಿಂದೆ ಇದೇ ರೆಸಾರ್ಟ್ ಮಾಲಕರಿಗೆ ಎಚ್ಚರಿಕೆ ನೀಡಿ ರೆಸಾರ್ಟ್ ಆರಂಭಿಸಿದರೆ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಲಾಗಿತ್ತು. ಆದರೆ 1 ಕಳೆದ 1 ತಿಂಗಳ ಹಿಂದೆ ರಾತ್ರೋರಾತ್ರಿ ಜೆಸಿಬಿ ಮೂಲಕ ಕೆಲಸ ಮಾಡಿಸಿ ರೆಸಾರ್ಟ್ ಆರಂಭಿಸಿದ್ದಾರೆ. ಕಾನೂನು ಬದ್ಧವಾಗಿ ರೆಸಾರ್ಟ್ ನಡೆಸದೇ ಅಕ್ರಮವಾಗಿ ರೆಸಾರ್ಟ್ ಆರಂಭಿಸಿದ್ದಾರೆ. ಈ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವಕಾಶವಿದ್ದು, ಸಭೆಯಲ್ಲಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

ಅಕ್ರಮ ರೆಸಾರ್ಟ್‍ಗಳಿಂದಾಗಿ ಕಾನೂನು ಪ್ರಕಾರ ರೆಸಾರ್ಟ್ ನಡೆಸುತ್ತಿರುವವರಿಗೆ ತೊಂದರೆಯಾಗುತ್ತಿದೆ. ಪ್ರವಾಸಿಗರಿಗೂ ತೊಂದರೆಯಾಗುತ್ತಿದೆ. ಇಂತಹ ರೆಸಾರ್ಟ್‍ಗಳಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಹೆಸರಿಗೆ ಕಳಂಕ ಬರುತ್ತಿದೆ. ಕಾನೂನಿನಂತೆ ರೆಸಾರ್ಟ್ ನಡೆಸಲು ಅವಕಾಶ ಇದ್ದರೂ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿರುವುದು ವಿಪರ್ಯಾಸ. ಇಂತಹ ಅಕ್ರಮ ರೆಸಾರ್ಟ್‍ಗಳ ಬಗ್ಗೆ ಮಾಹಿತಿ ಇದ್ದು, ಮುಂದಿನ ದಿನಗಳಲ್ಲಿ ಪರಿಶೀಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ವಿನಾಯಕ್ ಸಾಗರ್ ಸೇರಿದಂತೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X