ಪುತ್ತೂರು: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು
ಸಾಂದರ್ಭಿಕ ಚಿತ್ರ
ಪುತ್ತೂರು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರ ವಲಯದ ಕಬಕ ಸಮೀಪದ ಮುಖ್ಯ ಎಂಬಲ್ಲಿ ರವಿವಾರ ನಡೆದಿದೆ.
ಮೂಲತಃ ಪುತ್ತೂರು ತಾಲೂಕಿನ ಕಲ್ಲೇಗ ನಿವಾಸಿ, ಪ್ರಸ್ತುತ ಬಲ್ನಾಡಿನಲ್ಲಿ ವಾಸ್ತವ್ಯ ಹೊಂದಿರುವ ವಿಜಯ ಗೌಡ (52) ಮೃತರು ಎಂದು ಗುರುತಿಸಲಾಗಿದೆ.
ಮುರ ಸಮೀಪ ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಬ್ರಹ್ಮಣ್ಯ ದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ರೈಲಿನಡಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ರೈಲ್ವೆ ಪೊಲೀಸರು ಕೇಸು ದಾಖಲಿಸಿದ್ದಾರೆ.
Next Story