Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಲ್ಲ ಆರೋಪಿಗಳನ್ನು ಬಂಧಿಸದಿರುವುದು...

ಎಲ್ಲ ಆರೋಪಿಗಳನ್ನು ಬಂಧಿಸದಿರುವುದು ಪೊಲೀಸ್ ಇಲಾಖೆಯ ವೈಫಲ್ಯ: ಜೆ.ಆರ್.ಲೋಬೊ

ಕಾಣಿಯೂರು ವ್ಯಾಪಾರಿಗಳ ಮೇಲಿನ ಬರ್ಬರ ಹಲ್ಲೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ24 Oct 2022 3:47 PM IST
share
ಎಲ್ಲ ಆರೋಪಿಗಳನ್ನು ಬಂಧಿಸದಿರುವುದು ಪೊಲೀಸ್ ಇಲಾಖೆಯ ವೈಫಲ್ಯ: ಜೆ.ಆರ್.ಲೋಬೊ

ಮಂಗಳೂರು, ಅ.24: ಕಡಬ ತಾಲೂಕಿನ ಕಾಣಿಯೂರಿನಲ್ಲಿ ಯುವಕರಿಬ್ಬರ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆಯ ಎಲ್ಲ ಆರೋಪಿಗಳನ್ನು ಬಂಧಿಸದೆ ಇರುವುದು ಪೊಲೀಸ್ ಇಲಾಖೆಯ ವೈಫಲ್ಯ. ಕೂಡಲೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರಣಾಂತಿಕ ಹಲ್ಲೆಗೀಡಾದ ಯುವಕರು ತಪ್ಪು ಮಾಡಿದ್ದರೆ ಅದಕ್ಕೆ ಪೊಲೀಸ್ ವ್ಯವಸ್ಥೆ ಇದೆ. ಆದರೆ ಸಾಯುವ ಸ್ಥಿತಿಯವರೆಗೆ ಹೊಡೆಯುತ್ತಾರೆ ಎಂದರೆ ಪೊಲೀಸ್ ವ್ಯವಸ್ಥೆ ಯಾಕೆ ಎಂದು ಪ್ರಶ್ನಿಸಿದರು

ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಹೋರಾಟ ನಡೆಸಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಯವರನ್ನು ಅವಾಚ್ಯವಾಗಿ ನಿಂದಿಸಿ ಟ್ರೋಲ್ ಮಾಡಿರುವ ಆರೋಪಿಯ ಮೇಲೆ ಯಾಕೆ ಇನ್ನೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ ಜೆ.ಆರ್. ಲೋಬೊ, ಇತ್ತೀಚೆಗೆ ಚೀತಾ ಸೀಮಂತದ ಕಾರ್ಟೂನ್ ಪೋಸ್ಟ್ ಮಾಡಿರುವ ಪ್ರಕರಣದಲ್ಲಿ ರಾತ್ರೋರಾತ್ರಿ ಪೊಲೀಸರಿಗೆ ಬಂಧಿಸಲು ಸಾಧ್ಯವಾಗುವುದಾದರೆ ಪ್ರತಿಭಾ ಕುಳಾಯಿ ಪ್ರಕರಣದಲ್ಲಿ ಆರೋಪಿಗಳ ಬಂಧನ ವಿಳಂಬ ಮಾಡುತ್ತಿರುವುದು ಯಾವ ನ್ಯಾಯ ಎಂದರು.

ಸಮಾಜದಲ್ಲಿ ನಡೆಯುತ್ತಿರುವ ಇಂತಹ ಕುಕೃತ್ಯಗಳಿಗೆ ರಾಜಕೀಯ ನಾಯಕರ ದ್ವೇಷ ಭಾಷಣಗಳೇ ಪ್ರಚೋದನೆ. ಮೊದಲು ಇಂಥ ದ್ವೇಷ ಭಾಷಣ ಮಾಡುವ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಸಕ್ತ ಪೊಲೀಸ್ ಇಲಾಖೆಯು ರಾಜಕಾರಣಿಗಳೊಂದಿಗೆ 'ಅಡ್ಜಸ್ಟ್ಮೆಂಟ್' ಮಾಡಿಕೊಂಡು ಕೆಲಸ ಮಾಡುತ್ತಿದೆ. ಪೊಲೀಸ್ ವ್ಯವಸ್ಥೆ ಸಂವಿಧಾನ, ಐಪಿಸಿ ಸೆಕ್ಷನ್‌ಗಳ ಪ್ರಕಾರ ಕೆಲಸ ಮಾಡಿ ಜನಸಾಮಾನ್ಯರಿಗೆ ರಕ್ಷಣೆ ನೀಡಲಿ. ಯಾವ ರಾಜಕಾರಣಿಗಳಿಗೂ ಮಣಿಯುವ ಅಗತ್ಯವಿಲ್ಲ. ರಾಜಕೀಯಪ್ರೇರಿತವಾಗಿ ಪೊಲೀಸರು ಕೆಲಸ ಮಾಡಿದರೆ ನಮಗೂ ಬೇರೆ ದಾರಿಯಿಲ್ಲದೆ ಬೀದಿಗಿಳಿಯಬೇಕಾಗುತ್ತದೆ ಎಂದು ಜೆ.ಆರ್. ಲೋಬೊ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನೀರಜ್‌ಪಾಲ್, ಶಾಂತಲಾ ಗಟ್ಟಿ, ಅಪ್ಪಿ, ಚಂದ್ರಕಲಾ, ಮಲ್ಲಿಕಾ ಪಕ್ಕಳ, ಶಬೀರ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X