ಖಾಸಗಿ ಬಸ್ ಮಾಲಕರಿಂದ ದುಪ್ಪಟ್ಟು ಹಣ ವಸೂಲಿ: 1 ಸಾವಿರಕ್ಕೂ ಅಧಿಕ ಪ್ರಕರಣ ದಾಖಲು

ಸಾಂದರ್ಭಿಕ ಚಿತ್ರ- PTI
ಬೆಂಗಳೂರು, ಅ.24: ದೀಪಾವಳಿ ಹಬ್ಬವನ್ನೇ ನೆಪವಾಗಿಸಿಕೊಂಡು ಪ್ರಯಾಣಿಕರ ಬಳಿ ದುಪ್ಪಟ್ಟು ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಮಾಲಕರಿಗೆ ಸಾರಿಗೆ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ರಾಜ್ಯದಲ್ಲಿ 1 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಿಸಿದ್ದಾರೆ.
ಪ್ರಯಾಣ ದರ ವಸೂಲಿ ಮಾಡುತ್ತಿರುವ ದೂರುಗಳನ್ನು ಆಧರಿಸಿ ಸಾರಿಗೆ ಇಲಾಖೆ ಅಧಿಕಾರಿಗಳು ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಧಾನಿ ಬೆಂಗಳೂರಿನಲ್ಲೇ 450 ಪ್ರಕರಣಗಳನ್ನು ದಾಖಲಿಸಲಾಗಿದ್ದಾರೆ.
ಅದೇ ರೀತಿ, ರಾಜ್ಯದ ವಿವಿಧೆಡೆಯೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಒಟ್ಟಾರೆ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಪ್ರಯಾಣ ದರ ಹೆಚ್ಚಳವಷ್ಟೇ ಅಲ್ಲದೇ, ದಾಖಲೆಗಳು ಸಮರ್ಪಕವಾಗಿ ಇಲ್ಲದ ಪ್ರಕರಣಗಳೂ ಇದರಲ್ಲಿ ಸೇರಿವೆ ಎಂದು ಸಾರಿಗೆ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆಗಳಿರುವುದರಿಂದ ಖಾಸಗಿ ಬಸ್ನಲ್ಲಿ ಪ್ರಯಾಣ ಮಾಡುವ ಜನರಿಂದ ಮೂರರಿಂದ ನಾಲ್ಕು ಪಟ್ಟು ಪ್ರಯಾಣ ದರ ವಸೂಲಿ ಮಾಡುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬಂದ ಹಿನ್ನೆಲೆ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
Karnataka Transport Officials raid Private bus for collecting double fare during Diwali festival in Bengaluru..!
— SAMEERISM✌ (@SameerDalasanur) October 23, 2022
ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಗಳಿಂದ ದುಪ್ಪಟ್ಟ ದರ ವಸೂಲಿ ಆರೋಪ ಬೆನ್ನಲ್ಲೇ, ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿ..!@tdkarnataka#depawali #privatebus #ticket pic.twitter.com/PjyAmpFYwZ







